ಎರಡು ಕಾರುಗಳ ನಡುವೆ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು.

ಬೆಳಗಾವಿ, ಡಿಸೆಂಬರ್,.29,2023(www.justkannada.in): ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ  ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಬೈಲಹೊಂಗಲ ತಾಲೂಕಿನ ಇಂಚಲ ಬಳಿ ಈ ಘಟನೆ  ನಡೆದಿದೆ. ಮಂಗಲಾ ಭರಮನಾಯ್ಕರ್(50) ಹಾಗೂ ಶ್ರೀಶೈಲ(40) ಮೃತಪಟ್ಟವರು. ಘಟನೆಯಲ್ಲಿ ನಾಲ್ವರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಕುರಿತು ಮುರಗೋಡ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Collision- between -two cars- Two died- on the spot.