Wednesday, October 14, 2026

Dasara Wishes

Strengthening DasraWishes_JK DasraWishes JK
Happy Dasara
Home Front Page ‘ಕದ್ಧುಮುಚ್ಚಿ ಕೊಲೊಂಬೊ ಯಾತ್ರೆ ಮಾಡಿಲ್ಲ’- ಜಮೀರ್ ಅಹ್ಮದ್ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ  ಕುಮಾರಸ್ವಾಮಿ...

‘ಕದ್ಧುಮುಚ್ಚಿ ಕೊಲೊಂಬೊ ಯಾತ್ರೆ ಮಾಡಿಲ್ಲ’- ಜಮೀರ್ ಅಹ್ಮದ್ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ  ಕುಮಾರಸ್ವಾಮಿ ತಿರುಗೇಟು…

ಬೆಂಗಳೂರು, ಸೆಪ್ಟಂಬರ್.12,2020(www.justkannada.in):  ಈ ಹಿಂದೆ ಹೆಚ್.ಡಿ.ಕುಮಾರಸ್ವಾಮಿ ಸಹಿತ ಜೆಡಿಎಸ್ ​ನ 26 ಶಾಸಕರು ಕೊಲಂಬೋಗೆ ಹೋಗಿದ್ವಿ ಎಂದು ಹೇಳಿಕೆ ನೀಡಿರುವ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಗೆ  ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟ್ವೀಟ್​ ಮಾಡಿ ತಿರುಗೇಟು ನೀಡಿದ್ದಾರೆ.

 

colombo-trip-former-cm-hd-kumaraswamy-mla-jamir-ahmed-statement

ಈ ಕುರಿತು ಟ್ವಿಟ್ಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಜೆಡಿಎಸ್ ಪಕ್ಷದ ಗೌಪ್ಯ ಕಾರ್ಯಸೂಚಿ ಹಾಗೂ ಮುಂದಿನ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು ಹಾಗೂ ಪ್ರಮುಖ ನಾಯಕರೊಂದಿಗೆ ಶ್ರೀಲಂಕಾದ ಕೊಲಂಬೋಗೆ ಒಮ್ಮೆ ಪ್ರವಾಸ ಹೋಗಿದ್ದು ನಿಜ. ಆದರೆ, ಕದ್ದು ಮುಚ್ಚಿ ಕೊಲಂಬೋ ಯಾತ್ರೆ ಮಾಡಿರಲಿಲ್ಲ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿಕೆ ಕುರಿತು ಸ್ಪಷ್ಟನೆ ನೀಡಿದ್ದಾರೆ.

ಹಾಗೆಯೇ ಮತ್ತೊಂದು ಟ್ವಟ್ಟರ್ ನಲ್ಲಿ, ಒಂದಾನೊಂದು ಕಾಲದಲ್ಲಿ ನಮ್ಮ ಪಕ್ಷದಲ್ಲಿದ್ದ ರಾಜಕಾರಣಿಯೊಬ್ಬರು ಜೆಡಿಎಸ್ ಶಾಸಕರು ಮತ್ತು ನಾನು ಕೊಲಂಬೋ ಪ್ರವಾಸ ಕೈಗೊಂಡಿದ್ದಾಗಿ ನೀಡಿರುವ ಹೇಳಿಕೆ ಎತ್ತಣ ಮಾಮರ ಎತ್ತಣ ಕೋಗಿಲೆ ಎಂಬಂತಿದೆ ಎಂದು ಜಮೀರ್ ಅಹ್ಮದ್ ಖಾನ್ ಗೆ ಹೆಚ್.ಡಿಕೆ ಟಾಂಗ್ ನೀಡಿದ್ದಾರೆ.

2014 ರ ಜೂನ್ ತಿಂಗಳಲ್ಲಿ ಪಕ್ಷ ಸಂಘಟನೆಗೆ ಬಗ್ಗೆ ವಿಸ್ತೃತವಾಗಿ ಚರ್ಚಿಸಲು ಕೊಲಂಬೋಗೆ ಪ್ರವಾಸ ಹೋಗುವುದಾಗಿ ಬಹಿರಂಗವಾಗಿಯೇ ಮಾಧ್ಯಮಗಳಿಗೆ ಹೇಳಿ ಹೋಗಿದ್ದಲ್ಲದೇ, ಅಲ್ಲಿ ನಡೆದ ಶಾಸಕರ ಜೊತೆಗಿನ ಚರ್ಚೆಯ ದೃಶ್ಯಾವಳಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದೆವು. ಇದರಲ್ಲಿ ಯಾವುದೇ ಗುಟ್ಟು ಇರಲಿಲ್ಲ ಎಂದು ಹೆಚ್.ಡಿ ಕುಮಾರಸ್ವಾಮಿ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

ನೆರೆಯ ರಾಜ್ಯ ಗೋವಾ ಇಲ್ಲವೇ ರಾಜ್ಯದ ರೆಸಾರ್ಟ್ ನಲ್ಲಿ ಸಭೆ ನಡೆಸುವುದಕ್ಕಿಂತ ಯಾವುದೇ ಅಡಚಣೆ ಇಲ್ಲದೆ ಶಾಸಕರೊಂದಿಗೆ ಮುಕ್ತವಾಗಿ ಚರ್ಚಿಸಲು ಕೊಲಂಬೋ ಪ್ರವಾಸ ದುಬಾರಿಯಲ್ಲ ಎಂಬ ಕಾರಣಕ್ಕೆ ಇಂತಹ ಸಭೆ ನಡೆಸಿದ್ದು ನಿಜ. ವಿಮಾನ ಹತ್ತುವಾಗಲೂ ಮತ್ತು ವಾಪಸು ಬಂದಾಗ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದೇನೆ ಎಂದು ಹೇಳಿದ್ದಾರೆ.colombo-trip-former-cm-hd-kumaraswamy-mla-jamir-ahmed-statement

ಕೊಲಂಬೋ ಪ್ರಯಾಣ ಅದೇ ಮೊದಲು ಮತ್ತು ಕೊನೆ. ಇದರಲ್ಲಿ ಬಚ್ಚಿಡುವುದು ಏನೇನೂ ಇಲ್ಲ. ಅವರು ನಮ್ಮೊಂದಿಗೆ ಬಂದಿದ್ದರೆ ಹೊರತು ನಾವು ಅವರೊಂದಿಗೆ ಹೋಗಿರಲಿಲ್ಲ ಎಂದು ಕೊಲೊಂಬೊ ಪ್ರವಾಸದ ಬಗ್ಗೆ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

Key words: Colombo- trip -Former CM -HD Kumaraswamy – MLA-Jamir Ahmed- statement