ನಾಳಿನ ಪದಗ್ರಹಣ ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಎಲ್ಲರೂ ಬನ್ನಿ- ಡಿ.ಕೆ ಶಿವಕುಮಾರ್ ಮನವಿ.

ಬೆಂಗಳೂರು,ಮೇ,19,2023(www.justkannada.in):  ನಾಳೆ ಮಧ್ಯಾಹ್ನ 12.30ಕ್ಕೆ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ಈ ಹಿನ್ನೆಲೆಯಲ್ಲಿ ನಾಳಿನ ಪದಗ್ರಹಣ ಕಾರ್ಯಕ್ರಮಕ್ಕೆ   ಬಿಜೆಪಿ ಜೆಡಿಎಸ್ ಗೆ ನಿಯೋಜಿತ ಡಿಸಿಎಂ ಡಿಕೆ ಶಿವಕುಮಾರ್ ವಿಶೇಷ ಆಹ್ವಾನ ನೀಡಿದ್ದಾರೆ. ಇನ್ನು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ಸಿದ್ಧತೆ ನಡೆಸಲಾಗುತ್ತಿದ್ದು ಇಂದು ಡಿ.ಕೆ ಶಿವಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.

ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್,  ನಾಳೆ ಐತಿಹಾಸಿಕ ಕಾರ್ಯಕ್ರಮ ನಡೆಯಲಿದೆ.  ನಾಳೇ ಪ್ರಮಾಣವಚನ ಕಾರ್ಯಕ್ರಮಕ್ಕೆ ರಾಷ್ಟ್ರೀಯ ನಾಯಕರು ಬರಲಿದ್ದಾರೆ. ಪದಗ್ರಹಣ ಕಾರ್ಯಕ್ರಮಕ್ಕೆ ಎಲ್ಲರೂ ಬರಬೇಕು. ಪಕ್ಷಾತೀತವಾಗಿ ಎಲ್ಲರೂ ಬನ್ನಿ. ಎಲ್ಲರೂ ಸೇರಿ ಒಗ್ಗಟ್ಟಿನಿಂದ ಮುಂದೆ ಹೋಗೋಣ ಎಂದರು.

ಮೊದಲ ಸಚಿವ ಸಂಪುಟ ಸಭೆಯಲ್ಲಿ ಭರವಸೆ ಈಡೇರಿಸುತ್ತೇವೆ. ರಾಜ್ಯದ ಜನತೆಗೆ ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ. ಇದು ಡಿಕೆಶಿ ಸಿದ್ಧರಾಮಯ್ಯ ಗ್ಯಾರಂಟಿ ಅಲ್ಲ,  ಕಾಂಗ್ರೆಸ್ ನ ಗ್ಯಾರಂಟಿ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Key words:  Come – tomorrow- CM-DCM-swearing- ceremony D.K Shivakumar