ಅಮ್ ಆದ್ಮಿ ಪಕ್ಷಕ್ಕೆ ಹಾಸ್ಯನಟ ಟೆನ್ನಿಸ್ ಕೃಷ್ಣ ಸೇರ್ಪಡೆ.

ಬೆಂಗಳೂರು,ಆಗಸ್ಟ್,4,2022(www.justkannada.in): ಕನ್ನಡ ಚಲನಚಿತ್ರ ರಂಗದ ಹಾಸ್ಯನಟ ಟೆನ್ನಿಸ್ ಕೃಷ್ಣ  ಇಂದು ಅಧಿಕೃತವಾಗಿ ಅಮ್ ಆದ್ಮಿ ಪಕ್ಷವನ್ನ ಸೇರ್ಪಡೆಯಾಗಿದ್ದಾರೆ.

ನಗರದ ಖಾಸಗಿ ಹೋಟೆಲ್ ನಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹಾಗೂ ಇನ್ನಿತರ ಹಿರಿಯ ಮುಖಂಡರ ಸಮ್ಮುಖದಲ್ಲಿ ನಟ ಟೆನಿಸ್ ಕೃಷ್ಣ ಆಮ್ ಆದ್ಮಿ ಪಕ್ಷಕ್ಕೆ ಸೇರಿದರು. ಬಳಿಕ ಮಾತನಾಡಿದ ಅವರು, ಅಮ್ ಆದ್ಮಿ ಪಕ್ಷದಲ್ಲಿ ಭ್ರಷ್ಟಾಚಾರವಿಲ್ಲದಿರುವುದರಿಂದ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ.  ನನಗೆ ಟಿಕೆಟ್ ಬೇಡ.  ಪಕ್ಷ ಸಂಘಟನೆಗಾಗಿ ಕೆಲಸ ಮಾಡುತ್ತೇನೆ.  ನನಗೆ ಅಧಿಕಾರ ಬೇಕಾಗಿಲ್ಲ. ಸೇವೆ ಮಾಡಲು ಬಂದಿದ್ದೇನೆ ಎಂದರು.

ಹಾಗೆಯೇ ಸರ್ಕಾರಿ ಕಾಲೇಜುಗಳನ್ನು ಮುಚ್ಚುವುದರ ವಿರುದ್ಧ ಹೋರಾಟ ಮಾಡುತ್ತೇನೆ. ಕೋಲಾರದಲ್ಲಿ ನೀರಿನ ಸಮಸ್ಯೆ ಬಗ್ಗೆ ಹೋರಾಟ ಮುಂದುವರೆಸುವೆ.  ಬಿಜೆಪಿಯವರು ಬಲವಂತವಾಗಿ ಹಿಂದಿ ಹೇರಿಕೆಗೆ ಯತ್ನಿಸುತ್ತಿದ್ದಾರೆ.  ಕರ್ನಾಟಕದಲ್ಲಿ ಕನ್ನಡ ಭಾಷೆಯೇ ಸಾರ್ವಭೌಮ. ಕನ್ನಡ ಭಾಷೆ ಉಳಿಯಬೇಕು ಎಂದರು.  ಟೆನ್ನಿಸ್ ಕೃಷ್ಣ ಅವರು 600ಕ್ಕ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

Key words: Comedian -Tennis Krishna -joins -Aam Aadmi Party.