ಬೈಕ್​ ಸವಾರನಿಗೆ ಕಾಮಿಡಿ ಸ್ಟಾರ್ ಚಂದ್ರಪ್ರಭಾ ಕಾರು ಡಿಕ್ಕಿ: ಪ್ರಕರಣ ದಾಖಲು.

ಚಿಕ್ಕಮಗಳೂರು,ಸೆಪ್ಟಂಬರ್,6,2023(www.justkannada.in): ಕಾಮಿಡಿ ಸ್ಟಾರ್ ಚಂದ್ರಪ್ರಭ ಜಿ. ಅವರ ಕಾರು ಬೈಕ್ ಸವಾರನಿಗೆ ಡಿಕ್ಕಿಯಾಗಿದ್ದು, ಆರೋಗ್ಯ ಸ್ಥಿತಿ ಗಂಭೀರ ಆಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಚಿಕ್ಕಮಗಳೂರು ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಚಿಕ್ಕಮಗಳೂರು ಸಮೀಪದ ನಾಗೇನಹಳ್ಳಿ ನಿವಾಸಿ ಮಾಲ್ತೇಶ್ ಎಂಬುವವರು ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ಕೆಲಸ ಮುಗಿಸಿ ಬೈಕ್​​ನಲ್ಲಿ ತೆರಳುತ್ತಿದ್ದರು. ಈ ವೇಳೆ ಚಂಧ್ರಪ್ರಭಾ ಅವರ ಕಾರು ಬೈಕ್​ಗೆ ಡಿಕ್ಕಿ ಹೊಡೆದಿದೆ.

ಈ ವೇಳೆ ಚಂದ್ರಪ್ರಭ ಮಾನವೀಯತೆ ತೋರಿಸಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ.  ಸದ್ಯ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಮಾಲ್ತೇಶ್​ಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಗಂಭೀರ ಆಗಿದೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಈ ಸಂಬಂಧ ಚಂದ್ರಪ್ರಭಾ ಅವರಿಗೆ ವಿಚಾರಣೆಗೆ ಬರುವಂತೆ ಪೊಲೀಸರು ಸೂಚನೆ ನೀಡಿದ್ದು, ಶೂಟಿಂಗ್ ಹಿನ್ನೆಲೆ ನಾಳೆ ಹಾಜರಾಗುವುದಾಗಿ ಚಂದ್ರಪ್ರಭಾ ತಿಳಿಸಿದ್ದಾರೆ ಎನ್ನಲಾಗಿದೆ.

Key words: Comedy star –Chandraprabha- car collides – biker-Case- registered.