ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ – ಸಂಸದ ಡಿ.ಕೆ.ಸುರೇಶ್​.

ಬೆಂಗಳೂರು,ಆಗಸ್ಟ್,16,2023(www.justkannada.in):  ಕೆಲ ಬಿಜೆಪಿ ಶಾಸಕರು ಕಾಂಗ್ರೆಸ್ ಗೆ ಮರಳುತ್ತಾರೆಂಬ ವಿಚಾರ ಚರ್ಚೆಯಾಗುತ್ತಿದ್ದು ಈ ಸಂಬಂಧ ಪ್ರತಿಕ್ರಿಯಿಸಿರುವ ಸಂಸದ ಡಿ.ಕೆ ಸುರೇಶ್ , ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ ಎಂದಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಸಂಸದ ಡಿ.ಕೆ ಸುರೇಶ್, ಕಾಂಗ್ರೆಸ್ ಪಕ್ಷ ಸೇರ್ಪಡೆ ಬಗ್ಗೆ ಹೈಕಮಾಂಡ್​ ಅಂತಿಮ ನಿರ್ಧಾರ ಕೈಗೊಳ್ಳುತ್ತದೆ.  ಲೋಕಸಭಾ ಚುನಾವಣೆ ಬಗ್ಗೆ ದೆಹಲಿಯಲ್ಲಿ ಸಭೆ ನಡೆದಿದೆ. ಯಾವ ರೀತಿ ಚುನಾವಣೆ ಎದುರಿಸಬೇಕು ಎಂದು ಚರ್ಚೆ ಆಗಿದೆ. ಅಭ್ಯರ್ಥಿ ಆಯ್ಕೆಗೆ ಮಾನದಂಡಗಳೇನು ಎಂಬ ಬಗ್ಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು.

Key words: comes – Congress -party – welcome – MP DK Suresh.