Monday, October 5, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Front Page ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಪ್ರಾರಂಭ: ಹಲವು ವಿಚಾರಗಳ ಬಗ್ಗೆ ಚರ್ಚೆ…

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಪ್ರಾರಂಭ: ಹಲವು ವಿಚಾರಗಳ ಬಗ್ಗೆ ಚರ್ಚೆ…

ಬೆಂಗಳೂರು,ಸೆ,18,2019(www.justkannada.in): ಮಾಜಿ ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದೆ.

ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದ್ದು, ರಾಜ್ಯದಲ್ಲಿ ಉಂಟಾಗಿರುವ ಪ್ರವಾಹಪೀಡಿತ ಪ್ರದೇಶಗಳಲ್ಲಿ ಆಗಿರುವ ಹಾನಿ ಮತ್ತು ಸರ್ಕಾರ ಕೈಗೊಂಡಿರುವ ಪರಿಹಾರ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ.  ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ಸರ್ಕಾರ ಒದಗಿಸಿರುವ ನೆರವು, ಬಿಜೆಪಿ ಸರ್ಕಾರ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡುವಲ್ಲಿ ಆಗುತ್ತಿರುವ ತಾರತಮ್ಯ ಹಾಗೂ ಅನುದಾನ ಕಡಿತ ಮಾಡಿರುವ ಬಗ್ಗೆ ಹಾಗೂ ಇನ್ನಿತರ ವಿಷಯಗಳ  ಕುರಿತು ಸಭೆಯಲ್ಲಿ ಚರ್ಚೆ ನಡೆಸುತ್ತಿದ್ದಾರೆ.

ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ  ದಿನೇಶ್ ಗುಂಡುರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ  ಈಶ್ವರ್ ಖಂಡ್ರೆ,  ಮಾಜಿ ಸಚಿವರುಗಳಾದ  ಆರ್. ವಿ ದೇಶಪಾಂಡೆ, ಕೆ. ಜೆ  ಜಾರ್ಜ್, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸೇರಿ ಹಲವರು ಭಾಗಿಯಾಗಿದ್ದಾರೆ.

Key words: Commencement –congress- legislative party –meeting-former minister -siddaramaiah