Monday, September 14, 2026

BDA Apartments

ವಾಣಿಜ್ಯ ಸಿಲಿಂಡರ್‌ ಬೆಲೆ 993 ರೂ. ಏರಿಕೆ BDA JK_Adv BDA Adv
Home Front Page ವಾಣಿಜ್ಯ ಸಿಲಿಂಡರ್‌ ಬೆಲೆ 993 ರೂ. ಏರಿಕೆ

ವಾಣಿಜ್ಯ ಸಿಲಿಂಡರ್‌ ಬೆಲೆ 993 ರೂ. ಏರಿಕೆ

ನವದೆಹಲಿ,ಮೇ,1,2026 (www.justkannada.in): ಮಧ್ಯಪ್ರಾಚ್ಯ ದೇಶಗಳಲ್ಲಿ ಯುದ್ದ ಹಿನ್ನೆಲೆಯಲ್ಲಿ ಇತ್ತೀಚೆಗೆ ದುಬಾರಿಯಾಗಿದ್ದ ವಾಣಿಜ್ಯ ಬಳಕೆಯ ಸಿಲಿಂಡರ್  ಬೆಲೆ ಇದೀಗ ಮತ್ತೆ ಏರಿಕೆಯಾಗಿದೆ.

ಹೌದು ವಾಣಿಜ್ಯ ಬಳಕೆಯ 19 ಕೆ.ಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ  ಬರೊಬ್ಬರಿ 993 ರೂ. ಏರಿಕೆಯಾಗಿದೆ.  ಏಪ್ರಿಲ್ 1ರಂದು ಕೊನೆಯದಾಗಿ 195.50 ರೂ.  ಹೆಚ್ಚಿಸಲಾಗಿತ್ತು. ಅದಕ್ಕೂ ಮುನ್ನ ಮಾರ್ಚ್ 1ರಂದು 114.5 ರೂ. ಏರಿಕೆಯಾಗಿತ್ತು.

ಚುನಾವಣೆ ಮುಗಿಯುತ್ತಿದ್ದಂತೆ ಇದೀಗ ವಾಣಿಜ್ಯ ಸಿಲಿಂಡರ್ ಬೆಲೆ ಹೆಚ್ಚಳವಾಗಿದೆ. ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಏರಿಕೆಯಿಂದ ಇದೀಗ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಾಖಲೆಯ ಸಿಲಿಂಡರ್ ಬೆಲೆ 3,071.5 ರೂ.ಗೆ ತಲುಪಿದೆ. ಇನ್ನು ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಿಲ್ಲ

Key words: Commercial cylinder, price, hiked , Rs 993