ಮುಂದೆ ನಿಮ್ಮಂಥವರು ಆತ್ಮಹತ್ಯೆ ಮಾಡಿಕೊಳ್ಳಬಹುದು-ಡಿಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಸಿಕಾಂತ್ ಸೆಂಥಿಲ್ ವಿರುದ್ದ ಕಿಡಿಕಾರಿದ ಬಿಜೆಪಿ ಶಾಸಕ…

ಉಡುಪಿ, ಸೆ,10,2019(www.justkannada.in):  ಕಳೆದ ಎರಡು ದಿನದ ಹಿಂದೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ವಿರುದ್ದ ಕಾರ್ಕಾಳ ಬಿಜೆಪಿ ಶಾಸಕ ಸುನೀಲ್ ಕುಮಾರ್ ಕಿಡಿಕಾರಿದ್ದಾರೆ.

ಪ್ರಧಾನಿ ಮೋದಿ ನಿಲುವನ್ನ ವಿರೋಧಿಸಿ ರಾಜೀನಾಮೆ ನೀಡಿದ್ದೀರಿ. ಮುಂದೆ ನಿಮ್ಮಂಥವರು ಆತ್ಮಹತ್ಯೆ ಮಾಡಿಕೊಳ್ಳಬಹುದು ಎಂದು ಸಸಿಕಾಂತ್ ಸೆಂಥಿಲ್ ವಿರುದ್ದ ಶಾಸಕ ಸುನೀಲ್ ಕುಮಾರ್ ಹರಿಹಾಯ್ದಿದ್ದಾರೆ.

ಉಡುಪಿಯಲ್ಲಿ ಇಂದು ಮಾತನಾಡಿದ ಶಾಸಕ ಸುನೀಲ್ ಕುಮಾರ್, ಕಾಶ್ಮೀರ ರಾಮಮಂದಿರ ವಿಚಾರದಲ್ಲಿ ಜಿಲ್ಲಾಧಿಕಾರಿಯವರಿಗೆ ಬೇಸರವಾಗಿದೆಯಂತೆ. ಈ ಜಿಲ್ಲಾಧಿಕಾರಿ ಅಂತಹ ಮನಸ್ಥಿತಿ ಇರುವವರಿಗೆ ಎಚ್ಚರಿಕೆ ನೀಡುತ್ತೇವೆ. ಒಬ್ಬ ಜಿಲ್ಲಾಧಿಕಾರಿ ರಾಜೀನಾಮೆ ಕೊಟ್ಟರೇ ನಮ್ಮ ನಿಲುವು ಬದಲಾಗುವುದಿಲ್ಲ ಎಂದು ಟಾಂಗ್ ಕೊಟ್ಟರು.

ಜಗತ್ತಿಉ ಭಾರತದ ಆಡಳಿತವನ್ನ ಒಪ್ಪಿಕೊಳ್ಳುತ್ತೆ. ಭಾರತದ ನಾಗರೀಕರು ಮೋದಿ ಅವರ ಕೆಲಸ ಮೆಚ್ಚಿಕೊಂಡಿದ್ದಾರೆ. ಯಾರೋ ಒಬ್ಬ ಜಿಲ್ಲಾಧಿಕಾರಿ ರಾಜೀನಾಮೆ ಕೊಡ್ತಾರೆ ಅಂದರೆ ನಾವೇನು ಮಾಡಲು ಆಗಲ್ಲ. ಪ್ರಧಾನಿ ಮೋದಿ ಸರ್ಕಾರ ಭಾರತದ ಪ್ರಜಾಪ್ರಭುತ್ವ ಗಟ್ಟಿಗೊಳಿಸಿದೆ ಎಂದು ಶಾಸಕ ಸುನೀಲ್ ಕುಮಾರ್ ತಿಳಿಸಿದರು.

Key words: commit suicide-against-Sasikanth Senthil -BJP MLA-sunil kumar