Wednesday, September 9, 2026

BDA Apartments

Home Crime ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣು

ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣು

ಕೋಲಾರ,ಜುಲೈ25,2026 (www.justkannada.in):  ತಾಯಿ ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

ಕೋಲಾರದ ಛತ್ರಕೋಡಿಹಳ್ಳಿ ಬಳಿ ಈ ಘಟನೆ ನಡೆದಿದೆ.  ತಾಯಿ ಪ್ರಮೀಳ (36) ಮಗಳು ಸ್ವಪ್ನ ಮಗ ಚರಣ್ ಜೊತೆ ಕೃಷಿಹೊಂಡಕ್ಕೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಮೃತರು ಬೆಗ್ಲಿಬೇಣಜೇನಹಳ್ಳಿ ಗ್ರಾಮದ ಸುರೇಶ್ ಎಂಬುವವರ ಪತ್ನಿ ಮಕ್ಕಳಾಗಿದ್ದು ಖಾಸಗಿ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Mother, commits suicide, , two children