ಬಿಜೆಪಿಯ ಸಂವಿಧಾನ ವಿರೋಧಿ ತಾರತಮ್ಯ ನೀತಿಯನ್ನು ಅಳಿಸಿದ್ದೇವೆ- ಸಿಎಂ ಸಿದ್ಧರಾಮಯ್ಯ.

ಬೆಂಗಳೂರು, ಜೂನ್ 19,2023(www.justkannada.in):  ಸರ್ಕಾರ ಸರ್ವರಿಗೂ ಸೇರಿದ್ದು. ಬಿಡಿ ಬಿಡಿಯಾಗಿ ಒಂದು ಜಾತಿ, ಒಂದು ಧರ್ಮದ ಪರವಾಗಿ ವರ್ತಿಸುವುದು ಸಂವಿಧಾನ ವಿರೋಧಿ ಕೃತ್ಯವಾಗುತ್ತದೆ. ಬಿಜೆಪಿಯ ಸಂವಿಧಾನ ವಿರೋಧಿ ತಾರತಮ್ಯ ನೀತಿಯನ್ನು ಅಳಿಸಿದ್ದೇವೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಬಿಜೆಪಿ ಅವಧಿಯಲ್ಲಿ ಕೋಮು ರಾಜಕಾರಣಕ್ಕೆ  ಬಲಿಯಾದ ಬಳಿಕವೂ ಸರ್ಕಾರದ ತಾರತಮ್ಯ ನೀತಿಯಿಂದ ವಂಚನೆಗೆ ಒಳಗಾಗಿದ್ದ ಆರು ಕುಟುಂಬಗಳಿಗೆ ತಲಾ 25 ಲಕ್ಷ ಮೊತ್ತದ ಪರಿಹಾರ ಚೆಕ್ ಗಳನ್ನು ವಿತರಿಸಿ  ಸಿಎಂ ಸಿದ್ಧರಾಮಯ್ಯ ಮಾತನಾಡಿದರು.

ಮೃತರ ಕುಟುಂಬದ ಕಣ್ಣೀರು ಒರೆಸುವುದರಲ್ಲೂ, ಪರಿಹಾರ ನೀಡುವುದರಲ್ಲೂ ಬಿಜೆಪಿ ಪರಿವಾರ ತಾರತಮ್ಯವನ್ನು ಆಚರಿಸಿತ್ತು. ಸರ್ಕಾರ ಒಂದು ಜಾತಿ, ಒಂದು ಧರ್ಮಕ್ಕೆ ಸೇರಿದ್ದಲ್ಲ. ಸರ್ವರಿಗೂ ಸೇರಿದ್ದು. ಬಿಜೆಪಿಯ ದ್ವೇಷ ಮತ್ತು ತಾರತಮ್ಯದ ರಾಜಕಾರಣದ ವಿರುದ್ಧ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಸದನದಲ್ಲೇ ಧ್ವನಿ ಎತ್ತಿದ್ದೆ. ಕೋಮುಗಲಭೆಗಳಿಗೆ  ಬಲಿಯಾದ ಮೃತರ ಹೆಸರಲ್ಲೂ ಬಿಜೆಪಿ ತಾರತಮ್ಯ ನೀತಿಯನ್ನು ಅನುಸರಿಸಿತು. ಮೃತರ ಕುಟುಂಬದವರ ಕಣ್ಣೀರು ಒರೆಸುವುದು ಮತ್ತು ಪರಿಹಾರ ವಿತರಣೆಯಲ್ಲೂ ಹಿಂದಿನ ಸರ್ಕಾರ ತಾರತಮ್ಯವನ್ನು ಮೆರೆದಿತ್ತು. ಹಿಂದಿನ ಬಿಜೆಪಿ ಪರಿವಾರ ಮಾಡಿದ ತಾರತಮ್ಯವನ್ನು ಸರಿ ಪಡಿಸಿದ್ದೇವೆ ಎಂದರು.

ನಮ್ಮ ಅವಧಿಯಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಮತಾಂಧರಿಗೆ, ಅನೈತಿಕ ಪೊಲೀಸ್ ಗಿರಿಗೆ, ಜಾತಿ-ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡ್ತೀವಿ. ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಚಲುವರಾಯಸ್ವಾಮಿ, ಜಮೀರ್ ಅಹಮದ್ ಖಾನ್, ರಾಜಕೀಯ ಕಾರ್ಉದರ್ಶಿಗಳಾದ ನಾಸಿರ್ ಅಹಮದ್, ಗೋವಿಂದರಾಜು ಸೇರಿ ಇತರೆ ನಾಯಕರು ಉಪಸ್ಥಿತರಿದ್ದರು.

Key words:  communal riots – BJP –government-compensation- CM -Siddaramaiah.

ENGLISH SUMMARY….

Government does not belong to one caste or one religion : It belongs to all: CM Siddaramaiah
Bangalore, June 19: Chief Minister Siddaramaiah said that Government belongs to everyone. Acting in favor of one caste and one religion is an anti-constitutional act.
He was speaking after distributing compensation cheque of Rs. 25 lakh each to six families who were victims of communal riots during the previous Government’s period.

‘When I was the Leader of the Opposition, I raised my voice in the House against BJP’s politics of hatred and discrimination. Even in the names of dead victims of communal riots, BJP followed a policy of discrimination. The previous government also discriminated in consoling the deceased family members and distributing compensation.’ He said that we have corrected the discrimination done by the previous BJP family.

In our time, fanatics who take up the law, moral policing, those who take up the law in the name of caste-religion will be punished. He said that he has given a clear instruction to the police department to take strict legal action.

Ministers Cheluvarayaswamy, Jameer Ahmed Khan, political secretary to CM Nasir Ahmed, Govindaraju and other leaders were present on this occasion.