Sunday, August 9, 2026

BDA Apartments

Home Front Page ಉಕ್ರೇನ್ ನಲ್ಲಿ ಮೃತಪಟ್ಟ ವಿದ್ಯಾರ್ಥಿಗಳಿಗೆ ಪರಿಹಾರದ ಬಗ್ಗೆ ಕೇಂದ್ರ ನಿರ್ಧಾರ- ಗೃಹ ಸಚಿವ ಅರಗ ಜ್ಞಾನೇಂದ್ರ.

ಉಕ್ರೇನ್ ನಲ್ಲಿ ಮೃತಪಟ್ಟ ವಿದ್ಯಾರ್ಥಿಗಳಿಗೆ ಪರಿಹಾರದ ಬಗ್ಗೆ ಕೇಂದ್ರ ನಿರ್ಧಾರ- ಗೃಹ ಸಚಿವ ಅರಗ ಜ್ಞಾನೇಂದ್ರ.

ತುಮಕೂರು,ಮಾರ್ಚ್,3,2022(www.justkannada.in): ಉಕ್ರೇನ್ ನಲ್ಲಿ ಮೃತಪಟ್ಟ ವಿದ್ಯಾರ್ಥಿಗಳಿಗೆ ಪರಿಹಾರ ನೀಡುವ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಮಾಡಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಈ ಕುರಿತು ತುಮಕೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಮೃತಪಟ್ಟ ವಿದ್ಯಾರ್ಥಿಗಳಿಗೆ ಪರಿಹಾರದ ಬಗ್ಗೆ ಕೇಂದ್ರ ನಿರ್ಧಾರ ಮಾಡಲಿದೆ.  ಪರಿಹಾರ ನೀಡುವ ಬಗ್ಗೆ ರಾಜ್ಯ ಸರ್ಕಾರದಲ್ಲೂ ಚರ್ಚೆ ಮಾಡಲಾಗುತ್ತದೆ ಎಂದರು.

ಇನ್ನು ನಿಟ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಅನ್ಯಾಯ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಅರಗ ಜ್ಞಾನೇಂದ್ರ,  ಈ ಬಗ್ಗೆ  ಸಂಬಂಧಿಸಿದ ಸಚಿವರು ಮಾತನಾಡುತ್ತಾರೆ ಎಂದು ತಿಳಿಸಿದರು.

key words: compensation -students – Ukraine- Araga Jnanendra.