ಎಲ್ಲಾ ನಾಯಕರ ಒತ್ತಾಯದಿಂದ ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಪರ್ಧೆ- ಮಲ್ಲಿಕಾರ್ಜುನ ಖರ್ಗೆ.

ನವದೆಹಲಿ,ಅಕ್ಟೋಬರ್,14,2022(www.justkannada.in): ಎಲ್ಲಾ ನಾಯಕರ ಒತ್ತಾಯದಿಂದ ಎಐಸಿಸಿ ಅಧ್ಯಕ್ಷ ಸ್ಥಾನಚುನಾವಣೆಗೆ ಸ್ಪರ್ಧಿಸಿದ್ದೇನೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ನಾನಾಗಿ ಆಪೇಕ್ಷೆ ಪಟ್ಟು ನಿಂತಿರುವ ಚುನಾವಣೆಯಲ್ಲ ಎಲ್ಲಾ ನಾಯಕರ ಒತ್ತಾಯದಿಂದ ಸ್ಪರ್ಧಿಸಿದ್ದೇನೆ.  ಹತ್ತು ರಾಜ್ಯಗಳಲ್ಲಿ ಪ್ರವಾಸ ಮಾಡಿದ್ದೇನೆ. ಹಲವು ನಾಯಕರಿಗೆ ಕರೆ ಮಾಡಿ ಮಾತನಾಡಿದ್ದೇನೆ ಎಂದರು.

ಅಕ್ಟೋಬರ್ 17 ರಂದು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ಕಣದಲ್ಲಿ ಶಶಿತರೂರ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಸ್ಪರ್ಧಿಸಿದ್ದಾರೆ.

Key words: Competition – election – AICC President -Mallikarjuna Kharge.