ಹಾಸನದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ : ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡು ಕೆಲಸ ಮಾಡಿವಂತೆ ಹೆಚ್.ಡಿ ದೇವೇಗೌಡರು ಕರೆ.

0
1

ಬೆಂಗಳೂರು,ಡಿಸೆಂಬರ್,1,2023(www.justkannada.in): ಹಾಸನದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧಿಸಲಿದ್ದಾರೆ. ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡು ಕೆಲಸ ಮಾಡಬೇಕೆಂದು ಜೆಡಿಎಸ್ ನಾಯಕರಿಗೆ  ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಕರೆ ನೀಡಿದರು.

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಶ್ರೀರಾಮದೇವರ ಕಟ್ಟೆಯಲ್ಲಿ ಮಾತನಾಡಿದ ಹೆಚ್.ಡಿ ದೇವೇಗೌಡರು, ಬಿಜೆಪಿ ಜೊತೆ ಒಗ್ಗಟ್ಟಾಗಿ ಕೆಲಸ ಮಾಡಿ ಜಿಲ್ಲೆಯ ಕೀರ್ತಿ ಹೆಚ್ಚಿಸೋಣ. ಬಿಜೆಪಿ ಜೊತೆ ಸೇರಿ ಕಾಂಗ್ರೆಸ್ ವಿರುದ್ಧ ಹೋರಾಡಲು ತೀರ್ಮಾನಿಸಿದ್ದೇವೆ ಎಂದರು.

ಪಂಚ ರಾಜ್ಯಗಳ ಚುನಾವಣೆಯ ಎಕ್ಸಿಟ್ ಪೋಲ್ ರಿಪೋರ್ಟ್ ಬಂದಿದೆ. ಒಂದೆರಡು ಕಡೆ ಕಾಂಗ್ರೆಸ್, ಒಂದೆರಡು ಕಡೆ ಬಿಜೆಪಿ ಎಂದು ಸಮೀಕ್ಷೆ ಫಲಿತಾಂಶ ತಿಳಿಸಿದೆ. ವಿಧಾನಸಭಾ ಚುನಾವಣೆ ಲೋಕಸಭೆ ಮೇಲೆ ಪರಿಣಾಮ ಬೀರುವುದಿಲ್ಲ. ಇದು ನನ್ನ ರಾಜಕೀಯ ಅನುಭವದಲ್ಲಿ ಹೇಳುತ್ತಿದ್ದೇನೆ ಎಂದು  ಹೆಚ್.ಡಿಡಿ ಹೇಳಿದರು.

ಮುಂದಿನ ಲೋಕಸಭೆಯಲ್ಲಿ ನಮಗೆ ಎಷ್ಟು ಸೀಟು ಹಂಚಿಕೆಯಾಗಲಿದೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಈ ಬಗ್ಗೆ ಪ್ರಧಾನಿ, ಬಿಜೆಪಿ ಅಧ್ಯಕ್ಷಕರು, ಹೆಚ್ ​ಡಿ ಕುಮಾರಸ್ವಾಮಿ ತೀರ್ಮಾನ ಮಾಡಲಿದ್ದಾರೆ ಎಂದು ದೇವೇಗೌಡರು ತಿಳಿಸಿದರು.

Key words: Competition  Hassan – Prajwal Revanna-Former PM-HD Deve Gowda