ಸಚಿವ ಚಲುವರಾಯಸ್ವಾಮಿ ವಿರುದ್ದ ದೂರು ವಿಚಾರ:  ಸಿಐಡಿ ತನಿಖೆಗೆ ಸರ್ಕಾರ ತೀರ್ಮಾನ.

ಬೆಂಗಳೂರು,ಆಗಸ್ಟ್,8,2023(www.justkannada.in):  ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ದ ಸಹಾಯಕ ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ ವಿಚಾರವನ್ನ ಸಿಐಡಿ ತನಿಖೆಗೆ ವಹಿಸಲು ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.

ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಆರೋಪಿಸಿ ಮಂಡ್ಯ ಜಿಲ್ಲೆಯ ಕೃಷಿ ಅಧಿಕಾರಿಗಳು ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದು ದೂರು ನೀಡಿದ್ದಾರೆ ಎನ್ನಲಾಗಿತ್ತು. ಆದರೆ ಈ ಪತ್ರವನ್ನ ಸಚಿವ ಚಲುವರಾಯಸ್ವಾಮಿ ಅವರು ಫೇಕ್ ಲೆಟರ್ ಎಂದು ಹೇಳಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ  ಸಿಐಡಿ ತನಿಖೆ ನಡೆಸಲು ಸರ್ಕಾರ ತೀರ್ಮಾನ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಧಿಕಾರಿಗಳ ಪತ್ರ ಸಂಬಂಧ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಜೊತೆ ಸಿಎಂ ಸಿದ್ಧರಾಮಯ್ಯ, ಸುಧೀರ್ಘ ಚರ್ಚೆ ನಡೆಸಿದ್ದಾರೆ ಎನ್ನಲಾಗಿದ್ದು ಸಿಐಡಿ ತನಿಖೆಗೆ ವಹಿಸಿ ಆದೇಶಿಸುವ ಸಾಧ್ಯತೆ ಇದೆ.

Key words: complaint –against- Minister –Chaluvarayaswamy-CID- investigation.