ಸಚಿವ ಕೆ.ಎನ್ ರಾಜಣ್ಣ ವಿರುದ್ದ ಕಾಂಗ್ರೆಸ್ ಹೈಕಮಾಂಡ್ ಗೆ ದೂರು.

ಬೆಂಗಳೂರು, ಜನವರಿ,12,2024(www.justkannada.in): ಮೂರು ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಠಿಗೆ ಆಗ್ರಹ ವಿಚಾರಕ್ಕೆ ಸಂಬಂಧಿಸಿದಂತೆ  ಸಹಕಾರ ಸಚಿವ ಕೆ.ಎನ್ ರಾಜಣ್ಣ  ವಿರುದ್ದ ಪಕ್ಷದ ಹೈಕಮಾಂಡ್ ಗೆ ಕಾರ್ಯಕರ್ತರು ದೂರು ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರಿಗೆ ಸ್ವಪಕ್ಷದ ಕಾರ್ಯಕರ್ತರೇ ದೂರು ನೀಡಿದ್ದಾರೆ. ಅಲ್ಲದೇ ಸಚಿವ ಕೆಎನ್​​ ರಾಜಣ್ಣ ಅವರನ್ನು ಸಂಪುಟದಿಂದ ಕೈ ಬಿಡುವಂತೆ ಆಗ್ರಹಿಸಿದ್ದಾರೆ ಎನ್ನಲಾಗಿದೆ.

ಸಚಿವ ಕೆ. ಎನ್​ ರಾಜಣ್ಣ ಅವರು ಪದೇ ಪದೇ ಎಐಸಿಸಿ ಅಧ್ಯಕ್ಷ, ಕೆಪಿಸಿಸಿ ಅಧ್ಯಕ್ಷರ ಆದೇಶದ ವಿರುದ್ಧ ಮಾತಾಡುತ್ತಿದ್ದಾರೆ. ಸಚಿವ ಕೆಎನ್​ ರಾಜಣ್ಣ ಅನವಶ್ಯಕವಾಗಿ ಡಿಸಿಎಂ ವಿಚಾರದ ಬಗ್ಗೆ ಮಾತನಾಡುತ್ತಿದ್ದಾರೆ. ಕೆ.ಎನ್​.ರಾಜಣ್ಣ ಹೇಳಿಕೆ ಬೇಜವಾಬ್ದಾರಿಯಿಂದ ಕೂಡಿದೆ. ಸಚಿವರ ಡಿನ್ನರ್ ಮೀಟಿಂಗ್​ ಬಗ್ಗೆ ತಪ್ಪು ಸಂದೇಶವನ್ನು ರವಾನಿಸುತ್ತಿದೆ. ಕಾಂಗ್ರೆಸ್ ಪಕ್ಷ ಇಂತಹ ಚಟುವಟಿಕೆಗಳನ್ನು ಸಹಿಸಬಾರದು. ಸಂಪುಟದಿಂದ ಸಚಿವ ಕೆ.ಎನ್.ರಾಜಣ್ಣರನ್ನು ಕೈಬಿಡುವಂತೆ ಕಾಂಗ್ರೆಸ್​​ ನ 10 ಕಾರ್ಯಕರ್ತರು ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

Key words: Complaint – Congress- High Command- against- Minister- KN Rajanna