Sunday, August 23, 2026

BDA Apartments

Home Front Page ಮುಕ್ತ ವಿವಿ ಕುಲಪತಿ ಡಾ.ಎಸ್.ವಿದ್ಯಾಶಂಕರ್ ವಿರುದ್ಧ ಎಸಿಬಿಗೆ ದೂರು

ಮುಕ್ತ ವಿವಿ ಕುಲಪತಿ ಡಾ.ಎಸ್.ವಿದ್ಯಾಶಂಕರ್ ವಿರುದ್ಧ ಎಸಿಬಿಗೆ ದೂರು

ಮೈಸೂರು, ಜನವರಿ 19, 2021 (www.justkannada.in): ಮುಕ್ತ ವಿವಿ ಕುಲಪತಿ ಸೇರಿದಂತೆ ಕೆಲವು ಅಧಿಕಾರಿಗಳ ವಿರುದ್ಧ ಮೈಸೂರು ಸಾಂಸ್ಕೃತಿಕ ಮತ್ತು ಶೈಕ್ಷಣಿಕ ವೇದಿಕೆ ಅಧ್ಯಕ್ಷ ವರುಣಾ ಮಹೇಶ್ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದಾರೆ.

ಮುಕ್ತ ವಿವಿ ಕುಲಪತಿ ಡಾ.ಎಸ್.ವಿದ್ಯಾಶಂಕರ್, ಕುಲಸಚಿವರು, ಹಣಕಾಸು ಅಧಿಕಾರಿಗಳು ಸೇರಿದಂತೆ ಹಲವರ ವಿರುದ್ಧ ಸುದೀರ್ಘ 9 ಪುಟಗಳ ದೂರು ಸಲ್ಲಿಸಿರುವ ವರುಣಾ ಮಹೇಶ್ ಮುಕ್ತ ವಿವಿಯಲ್ಲಿ ನಡೆದಿರುವ ಭ್ರಷ್ಟಾಚಾರ ಕುರಿತು ಸೂಕ್ತ ತನಿಖೆ ನಡೆಸಿ ಕ್ರಮ ವಹಿಸಬೇಕೆಂದು ಮನವಿ ಮಾಡಿದ್ದಾರೆ.

ವಿವಿಯಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ನೇಮಕ ವಿಚಾರದಲ್ಲಿ ವಿವಿಯ ಎಲ್ಲ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ವಿವಿ ಸಂಕಷ್ಟದಲ್ಲಿದ್ದರೂ ಇದ್ಯಾವುದನ್ನು ಲೆಕ್ಕಿಸದೇ ನಿಯಮಗಳನ್ನು ಮೀರಿ ಸಿಬ್ಬಂದಿ ನೇಮಕ ಸೇರಿದಂತೆ ಹಲವಾರು ವಿಚಾರಗಳಲ್ಲಿ ಭ್ರಷ್ಟಾಚಾರ ಎಸಗಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.