ಸಿಸಿಬಿ ತನಿಖೆಗೆ ಸಂಪೂರ್ಣ ಸಹಕಾರ- ವಿಚಾರಣೆ ಬಳಿಕ ನಿರೂಪಕ ಅಕುಲ್ ಬಾಲಾಜಿ ಹೇಳಿಕೆ…

ಬೆಂಗಳೂರು,ಸೆಪ್ಟಂಬರ್,19,2020(www.justkannada.in):  ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ನೋಟಿಸ್ ನೀಡಿದ್ದ ಹಿನ್ನೆಲೆ ಇಂದು ನಿರೂಪಕ ಅಕುಲ್ ಬಾಲಾಜಿ ಸೇರಿ ಮೂವರು ವಿಚಾರಣೆಗೆ ಹಾಜರಾಗಿದ್ದರು.

ನಿರೂಪಕ ಅಕುಲ್ ಬಾಲಾಜಿ, ನಟ ಸಂತೋಷ್ ಹಾಗೂ ಆರ್ ವಿ ಯುವರಾಜ್ ಅವರು ಇಂದು  ಸಿಸಿಬಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಸತತ 7 ಗಂಟೆಗಳ ಕಾಲ ಸಿಸಿಬಿಯ ಅಧಿಕಾರಿಗಳು  ಮೂವರನ್ನ ವಿಚಾರಣೆ ನಡೆಸಿದ್ದು ಇದೀಗ ವಿಚಾರಣೆ ಮುಕ್ತಾಯಗೊಂಡು, ಮೂವರು ಸಿಸಿಬಿ ಕಚೇರಿಯಿಂದ ಹೊರ ಬಂದಿದ್ದಾರೆ.

ಹೊರಬಂದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅಕುಲ್ ಬಾಲಾಜಿ, ಸಿಸಿಬಿ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇವೆ. ಮತ್ತೆ ವಿಚಾರಣೆಗೆ ಕರೆದರೇ ಹಾಜರಾಗುತ್ತೇವೆ ಎಂದಿದ್ದಾರೆ.Complete- cooperation – CCB- investigation-Akul Balaji

ಹಾಗೆಯೇ ನಟ ಸಂತೋಷ್ ಮಾತನಾಡಿ, ಮೂವರ ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದೇವೆ. ಮತ್ತೆ ವಿಚಾರಣೆಗೆ ಕರೆದರೇ ಹಾಜರಾಗುತ್ತೇವೆ ಎಂದರು.

Key words: Complete- cooperation – CCB- investigation-Akul Balaji