ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರ ಗೂಂಡಾಗಿರಿ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ.

ಮೈಸೂರು,ಡಿಸೆಂಬರ್,15,2021(www.justkannada.in): ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರು ನಡೆಸಿದ  ಗೂಂಡಾಗಿರಿ ಖಂಡಿಸಿ ಮೈಸೂರಿನಲ್ಲಿ ಮೈಸೂರು ಕನ್ನಡ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿ ಮೈಸೂರು ಕನ್ನಡ ವೇದಿಕೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರು ಕನ್ನಡ ಬಾವುಟವನ್ನ ಸುಟ್ಟುಹಾಕಿದ್ದಾರೆ. ಇಡೀ ಸರ್ಕಾರವೇ ಬೆಳಗಾವಿಯಲ್ಲಿದ್ದರೂ ಈ ಬಗ್ಗೆ ಕ್ರಮವಹಿಸುತ್ತಿಲ್ಲ.

ಕನ್ನಡ ಪರ ಸಂಘಟನೆಯ ಕಾರ್ಯಕರ್ತರನ್ನ ಬೆಳಗಾವಿ ಪೊಲೀಸರು ಬಂಧಿಸಿ ಕೇಸ್ ಬುಕ್ ಮಾಡಿದ್ದಾರೆ. ಆದರೆ ಕನ್ನಡ ಬಾವುಟ ಸುಟ್ಟುಹಾಕಿದವರ ಮೇಲೆ ಕೇಸ್ ದಾಖಲಿಸಲು ಮೀನಾಮೇಷ ಎಣಿಸುತ್ತಿದ್ದಾರೆ. ಕೂಡಲೇ ಎಂಇಎಸ್ ಕಾರ್ಯಕರ್ತರ ಬಂಧನ ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

Key words: condemn- MES- activists-kannada- protest – Mysore