ತಮಿಳುನಾಡಿಗೆ ನೀರು ಹರಿಸುತ್ತಿರುವುದಕ್ಕೆ ಖಂಡನೆ: ರೈತರಿಂದ ಆಹೋರಾತ್ರಿ ಧರಣಿ, ಆಕ್ರೋಶ.

ಮಂಡ್ಯ,ಆಗಸ್ಟ್,31,2023(www.justkannada.in):  ರಾಜ್ಯದಲ್ಲಿ ವಾಡಿಕೆಯಂತೆ ಸರಿಯಾಗಿ ಮಳೆಯಾಗದೇ ರೈತರು ಸಂಕಷ್ಟದಲ್ಲಿದ್ದಾರೆ ಡ್ಯಾಂಗಳು ಭರ್ತಿಯಾಗಿಲ್ಲ. ಬರದ ಛಾಯೆ  ಆವರಿಸಿದೆ. ಕುಡಿಯುವ ನೀರಿಗೂ ಸಂಕಷ್ಟ ತಲೆದೂರುವ ಪರಿಸ್ಥಿತಿ ಉಂಟಾಗಿದೆ.  ಹೀಗಿದ್ದರೂ ಸಹ ಇದನ್ನ ಅರಿಯದೇ ತಮಿಳುನಾಡಿಗೆ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ದ ರೈತರು ಸಿಡಿದೆದ್ದಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನ ವಿರೋಧಿಸಿ ಮಂಡ್ಯ ಜಿಲ್ಲೆಯಲ್ಲಿ ವಿವಿಧೆಡೆ ಪ್ರಾಧಿಕಾರ ಮತ್ತು ಸರ್ಕಾರದ ವಿರುದ್ದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಆರ್ ಎಸ್ ಜಲಾಶಯದ ಬಳಿ ರೈತರು ಅಹೋರಾತ್ರಿ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯಿಂದ ಮಂಡ್ಯದ ವಿಶ್ವೇಶ್ವರಯ್ಯ  ಪ್ರತಿಮೆ ಬಳಿ ಪ್ರತಿಭಟನೆ ನಡೆಯುತ್ತಿದ್ದು, ರೈತ ಮತ್ತು ಕನ್ನಡಪರ ವಿವಿಧ ಸಂಘಟನೆಗಳು ಸಾಥ್ ನೀಡಿವೆ.  ರಾಜ್ಯದಲ್ಲೇ ಸರಿಯಾಗಿ ಮಳೆಯಾಗದೇ ಕೃಷಿ ಮತ್ತು ಕುಡಿಯಲು ನೀರಿಗೆ ತೊಂದರೆ ಉಂಟಾಗಿದ್ದು ಇಂತಹ ಪರಿಸ್ಥಿತಿಯಲ್ಲೂ ತಮಿಳುನಾಡಿಗೆ ನೀರು ಹರಿಸಲು ಆದೇಶಿಸಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ವಿರುದ್ದ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Key words: Condemnation –caveri- water –Tamilnadu-mandya- farmers-protest