ತೈಲಬೆಲೆ ಏರಿಕೆಗೆ ಖಂಡನೆ: ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನಾ ರ್ಯಾಲಿ…

ಬೆಂಗಳೂರು,ಫೆಬ್ರವರಿ,12,2021(www.justkannada.in):  ದಿನೇ ದಿನೇ ತೈಲಬೆಲೆ ಏರಿಕೆಯಾಗುತ್ತಿರುವುದನ್ನ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ದ ರಾಜ್ಯ ಕಾಂಗ್ರೆಸ್ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದೆ.jk

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಕೃಷ್ಣಭೈರೇಗೌಡರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.condemnation-oil-price-rise-congress-protest-against-center

ಅಗತ್ಯ ವಸ್ತುಗಳ ಬೆಲೆ, ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನಾ ರ್ಯಾಲಿ ನಡೆಸುತ್ತಿದೆ. ನಗರದ ಬ್ಯಾಟರಾಯನಪುರದಿಂದ ಯಲಹಂಕವರೆಗೆ ರ್ಯಾಲಿ ನಡೆಯುತ್ತಿದ್ದು ಏರ್ ಪೊರ್ಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ ಎನ್ನಲಾಗಿದೆ.

Key words: Condemnation – oil price- rise-Congress -protest -against -Center