ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ಸೌದೆ ಒಲೆಯಲ್ಲಿ ಅಡುಗೆ ತಯಾರಿಸಿ ವಿಭಿನ್ನ ಪ್ರತಿಭಟನೆ…..

ಮೈಸೂರು,ಮಾರ್ಚ್,1,2021(www.justkannada.in):  ದೇಶದಲ್ಲಿ ಪೆಟ್ರೋಲ್, ಡೀಸೆಲ್ , ಗ್ಯಾಸ್ ಸಿಲಿಂಡರ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನ ವಿರೋಧಿಸಿ ಮೈಸೂರಿನಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯಿಂದ ಅಣಕು ಪ್ರತಿಭಟನೆ ನಡೆಸಲಾಯಿತು.jk

ನಗರದ  ಟೌನ್ ಹಾಲ್ ನ ಅಂಬೇಡ್ಕರ್ ಪ್ರತಿಮೆ ಬಳಿ  ವೇದಿಕೆ ಅಧ್ಯಕ್ಷ ಕೆ.ಎಸ್ ಶಿವರಾಮು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸೌದೆ ಒಲೆಯಲ್ಲಿ ಅಡುಗೆ ಮಾಡುವ ಮೂಲಕ ಅಣುಕು ಪ್ರತಿಭಟನೆ ನಡೆಸಿದ ಧರಣಿನಿರತರು, ಅಚ್ಚೇ ದಿನ್ ಮರ್ ಗಯಾ ಎಂದು ಘೋಷಣೆ ಕೂಗಿ ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ಹೊರಹಾಕಿದರು.condemnation-price-rise-different-protest-mysore

ಅಲ್ಲದೇ ಕೂಡಲೇ ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಇಳಿಸಬೇಕು. ಇಲ್ಲದಿದ್ದರೆ ರಾಜೀನಾಮೆ ನೀಡಿ ಮನೆಗೆ ಹೋಗುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

Key words: Condemnation – price rise-  different- protest-mysore