ಸುಪ್ರೀಂಕೋರ್ಟ್ ತೀರ್ಪಿಗೆ ಖಂಡನೆ: ಸೆ.23 ರಂದು ಮಂಡ್ಯ ಜಿಲ್ಲಾ ಬಂದ್ ಗೆ ಕರೆ.

ಮಂಡ್ಯ,ಸೆಪ್ಟಂಬರ್,21,2023(www.justkannada.in):  ಸರಿಯಾಗಿ ಮಳೆಯಾಗದೇ ಕೆಆರ್ ಎಸ್ ಜಲಾಶಯದಲ್ಲಿ ನೀರಿಲ್ಲದೇ ಇದ್ದರೂ ಸಹ ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ಹಿನ್ನೆಲೆ ಇದನ್ನ ಖಂಡಿಸಿ ಸೆಪ್ಟಂಬರ್ 23ಕ್ಕೆ ಮಂಡ್ಯ ಜಿಲ್ಲೆ ಬಂದ್ ಗೆ ಕರೆ ನೀಡಲಾಗಿದೆ.

ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ವತಿಯಿಂದ  ಬಂದ್ ಗೆ ಕರೆ ನೀಡಲಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಆಗ್ರಹಿಸಿ ಇಂದು ನಡೆದ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದೆ.

ಮಂಡ್ಯ ಜಿಲ್ಲಾ ಬಂದ್ ಸಂಬಂಧ ನಾಳೆ ರಾಜಕೀಯ, ಪಕ್ಷಗಳ ನಾಯಕರುಗಳು, ವರ್ತಕರು ಸಂಘಟನೆ ಮುಖಂಡರ ಜತೆ ಮತ್ತೊಂದು ಸುತ್ತಿನ ಸಭೆ ನಡೆಯಲಿದ್ದು ಬಂದ್ ರೂಪುರೇಷೆ ಬಗ್ಗೆ ನಿರ್ಧರಿಸಲಿದೆ.

ರಾಜ್ಯದಲ್ಲಿ ವ್ಯಾಪಕ ಮಳೆಯಾಗದೇ ಕಬಿನಿ, ಕೆಆರ್ ಎಸ್ ಜಲಾಶಯಗಳು ಭರ್ತಿಯಾಗಿಲ್ಲ. ಇದರಿಂದಾಗಿ ಕುಡಿಯಲು ನೀರು ಸಿಗದಂತಹ ಸ್ಥಿತಿ ತಲೆದೂರಲಿದೆ. ಇದರಿಂದಾಗಿ ಈಗಾಗಲೇ ಸರ್ಕಾರ 193 ತಾಲ್ಲೂಕುಗಳನ್ನ ಬರ ಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಿದೆ. ಇಂತಹ ಪರಿಸ್ಥಿತಿ ಇದ್ದರೂ ಸಹ ತಮಿಳುನಾಡಿಗೆ ನೀರು ಬಿಡಲು ಸುಪ್ರೀಂಕೋರ್ಟ್ ಆದೇಶಿಸಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

Key words: Condemnation -Supreme Court -verdict-Mandya district- bandh – September