Thursday, September 17, 2026

BDA Apartments

Home Front Page ಬಿಜೆಪಿ ವಿರುದ್ದ ಕಮಿಷನ್ ಆರೋಪ ಕೇಸ್: ರಾಹುಲ್ ಗಾಂಧಿಗೆ ಷರತ್ತು ಬದ್ದ ಜಾಮೀನು.

ಬಿಜೆಪಿ ವಿರುದ್ದ ಕಮಿಷನ್ ಆರೋಪ ಕೇಸ್: ರಾಹುಲ್ ಗಾಂಧಿಗೆ ಷರತ್ತು ಬದ್ದ ಜಾಮೀನು.

ಬೆಂಗಳೂರು,ಜೂನ್,7,2024 (www.justkannada.in): ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್​ ಆರೋಪ  ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರಿಗೆ ಷರತ್ತು ಬದ್ದ ಜಾಮೀನು ಮಂಜೂರು ಮಾಡಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.

ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಕಾಂಗ್ರೆಸ್ ಜಾಹೀರಾತು ಪ್ರಕಟಿಸಿತ್ತು. ಈ ಹಿನ್ನೆಲೆಯಲ್ಲಿ ಕೋರ್ಟ್ ನಲ್ಲಿ ಕಾಂಗ್ರೆಸ್ ವಿರುದ್ದ ಬಿಜೆಪಿ ಖಾಸಗಿ ದೂರು ದಾಖಲಿಸಿತ್ತು.ಬಿಜೆಪಿ ವಿರುದ್ದ ಕಮಿಷನ್ ಆರೋಪ ಕೇಸ್ rahul gandhi

ಪ್ರಕರಣ ಸಂಬಂಧ ಇಂದು ರಾಹುಲ್ ಗಾಂಧಿ ವಿಚಾರಣೆಗೆ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ರಾಹುಲ್ ಗಾಂಧಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ರಾಹುಲ್​ ಗಾಂಧಿ ಜೊತೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನ್ಯಾಯಾಲಯದಲ್ಲಿ ಹಾಜರಿದ್ದರು.

Key words: Conditional, bail, Rahul Gandhi, court