ಚಿಕ್ಕಬಳ್ಳಾಪುರ, ಜನವರಿ, 30,2026 (www.justkannada.in): ಶಿಡ್ಲಘಟ್ಟ ನಗರಸಭೆ ಆಯುಕ್ತೆ ಅಮೃತಾ ಗೌಡರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಜೀವ್ ಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ.
ಇಂದು ಆರೋಪಿ ರಾಜೀವ್ ಗೌಡರನ್ನು ಪೊಲೀಸರು ಶಿಡ್ಲಘಟ್ಟದ ಜೆಎಂಎಫ್ ಸಿ ಕೋರ್ಟ್ ಗೆ ಹಾಜರುಪಡಿಸಿದ್ದರು. ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ. 50 ಸಾವಿರ ರೂಪಾಯಿ ಶ್ಯೂರಿಟಿ ಬಾಂಡ್, ಪೊಲೀಸರ ತನಿಖೆಗೆ ಸಹಕರಿಸಲು ಸೂಚನೆ ನೀಡಿದೆ. ಅಲ್ಲದೇ ಪ್ರಮುಖವಾಗಿ ಜಾಮೀನು ಸಿಕ್ಕ ಖುಷಿಯಲ್ಲಿ ಪಟಾಕಿ ಹಚ್ಚಿ, ಸಂಭ್ರಮಾಚರಣೆ ಮಾಡದಂತೆ ಕೋರ್ಟ್ ತಾಕೀತು ಮಾಡಿದೆ.
ಪ್ರಕರಣ ದಾಖಲಾಗಿದ್ದ ಬಳಿಕ ರಾಜೀವ್ ಗೌಡ ಕೇರಳ ಗಡಿಯಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಕೋರ್ಟ್ ಮೊದಲು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಬಳಿಕ ಸ್ಥಳ ಮಹಜರು ಮಾಡಿ ತನಿಖೆ ಮಾಡಬೇಕಿದೆ. ಹೀಗಾಗಿ ತಮ್ಮ ವಶಕ್ಕೆ ನೀಡಬೇಕೆಂದು ಪೊಲೀಸರು ಮನವಿ ಮಾಡಿದ್ದು, ಇದರ ಮೇರೆಗೆ ಕೋರ್ಟ್ ಎರಡು ದಿನ ರಾಜೀವ್ ಗೌಡನನ್ನು ಪೊಲಿಸ್ ಕಸ್ಟಡಿಗೆ ನೀಡಿತ್ತು. ಇಂದು ಕಸ್ಟಡಿ ಅಂತ್ಯವಾಗಿದ್ದರಿಂದ ರಾಜೀವ್ ಗೌಡನನ್ನು ಶಿಡ್ಲಘಟ್ಟ ಜಿಎಂಎಫ್ ಕೋರ್ಟ್ಗೆ ಹಾಜರುಪಡಿಸಿದರು. ಇದೀಗ ಷರತ್ತು ಬದ್ಧ ಜಾಮೀನು ನೀಡಿ ಕೋರ್ಟ್ ಆದೇಶಿಸಿದೆ.
Key words: Life threat case, granted, conditional bail, Rajeev Gowda,







