ಆರ್.ಧೃವನಾರಾಯಣ್ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿಡಿ, ಮಲ್ಲಿಕಾರ್ಜುನ ಖರ್ಗೆ , ಹೆಚ್.ಡಿಕೆಯಿಂದ ಸಂತಾಪ.

ಮೈಸೂರು,ಮಾರ್ಚ್,11,2023(www.justkannada.in): ಕೆಪಿಸಿಸಿ ಅಧ್ಯಕ್ಷ ಆರ್.ಧೃವನಾರಾಯಣ್ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.

ಆರ್.ಧೃವನಾರಾಯಣ್ ನಿಧನಕ್ಕೆ ಟ್ವಿಟ್ ಮೂಲಕ ಕಂಬನಿ ಮಿಡಿದ ಹೆಚ್.ಡಿಡಿ, ರಾಜ್ಯ ಕಾಂಗ್ರೆಸ್ ನ ಹಿರಿಯ ಮುಖಂಡ ಆರ್.ಧೃವನಾರಾಯಣ್ ಅವರು ನಿಧನರಾದ ಸುದ್ದಿ ಕೇಳಿ ತೀವ್ರ ಆಘಾತ ಮತ್ತು ದುಃಖವಾಗಿದೆ. ಇವರ ಅಗಲಿಕೆಯಿಂದ ರಾಜ್ಯ ರಾಜಕಾರಣಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರಿಗೆ ಚಿರಶಾಂತಿ ಕರುಣಿಸಲಿ ಅವರ ಕುಟುಂಬ ಹಾಗೂ ನಾಡಿನ ಜನತೆಗೆ ದುಃಖ ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದು, ದೃವನಾರಾಯಣ್ ನಿಧನದ ಸುದ್ದಿ ತಿಳಿದು ತೀವ್ರ ದುಃಖ ನೋವಾಗಿದೆ. ಧೃವನಾರಾಯಣ್ ಕೇವಲ ತಳಮಟ್ಟದ ರಾಜಕೀಯ ವ್ಯಕ್ತಿಯಾಗಿರಲಿಲ್ಲ. ಅವರ ನಿಧನ ಕಾಂಗ್ರೆಸ್ ಗೆ ವೈಯಕ್ತಿಕವಾಗಿ ನಷ್ಟವಾಗಿದೆ. ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿಯಾಗುತ್ತೇನೆ ಎಂದಿದ್ದಾರೆ.

ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ, ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷರು ಸರಳ ಸಜ್ಜನ ರಾಜಕಾರಣಿಯಾಗಿದ್ದ ಶ್ರೀ ಆರ್.ಧ್ರುವನಾರಾಯಣ್ ಅವರು ಹೃದಯಘಾತದಿಂದ ನಿಧನರಾದರು ಎಂಬ ಸುದ್ದಿ ಕೇಳಿ ನನಗೆ ತೀವ್ರ ದಿಗ್ಬ್ರಮೆ ಆಘಾತ ಉಂಟಾಗಿದೆ.

ಅತ್ಯಂತ ಸ್ನೇಹಶೀಲ ವ್ಯಕ್ತಿಯಾಗಿದ್ದ ಅವರು ವಿಭಿನ್ನ ರಾಜಕಾರಣಿ ಆಗಿದ್ದರು. ಸೋಲುಗೆಲುವುಗಳನ್ನು ಸಮಚಿತ್ತದಿಂದ ಸ್ವೀಕರಿಸುತ್ತಿದ್ದ ಅವರು ಮತ್ತೊಬ್ಬರಿಗೆ ಮಾದರಿ ಆಗಿದ್ದರಲ್ಲದೆ, ಶಾಸಕರಾಗಿ, ಲೋಕಸಭೆ ಸದಸ್ಯರಾಗಿ ರಾಜ್ಯಕ್ಕೆ ಎಣೆ ಇಲ್ಲದ ಸೇವೆ ಮಾಡಿದ್ದರು. ಅವರನ್ನು ಕಳೆದುಕೊಂಡಿದ್ದು ವೈಯಕ್ತಿಕವಾಗಿ ನನಗೆ ಬಹಳ ದುಃಖ ಉಂಟು ಮಾಡಿದೆ.

ಶ್ರೀ ಆರ್.ಧ್ರುವನಾರಾಯಣ ಅವರ ಅಗಲಿಕೆ ನಮ್ಮ ರಾಜ್ಯಕ್ಕೆ ಭರಿಸಲಾಗದ ನಷ್ಟ. ಅವರಿಗೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕಂಬನಿ ಮಿಡಿದಿದ್ದಾರೆ.

Key words: Condolences – former PM-H.D Devegowda-Mallikarjuna Kharge- HD Kumaraswamy- -death – R. Dhruvanarayan.