Tuesday, August 4, 2026

BDA Apartments

Home Front Page ವೈಜ್ಞಾನಿಕವಾಗಿ ಮತ್ತೊಮ್ಮೆ ಜಾತಿ ಜನಗಣತಿ ನಡೆಸಿ- ಕೇಂದ್ರ ಸಚಿವ ವಿ.ಸೋಮಣ್ಣ ಆಗ್ರಹ

ವೈಜ್ಞಾನಿಕವಾಗಿ ಮತ್ತೊಮ್ಮೆ ಜಾತಿ ಜನಗಣತಿ ನಡೆಸಿ- ಕೇಂದ್ರ ಸಚಿವ ವಿ.ಸೋಮಣ್ಣ ಆಗ್ರಹ

ತುಮಕೂರು, ಅಕ್ಟೋಬರ್,10,2024 (www.justkannada.in): ಜಾತಿಜನಗಣತಿ ವರದಿಯನ್ನು ಅವೈಜ್ಞಾನಿಕವಾಗಿ ಸಿದ್ಧಪಡಿಸಿದ್ದು ಮತ್ತೊಮ್ಮೆ ವೈಜ್ಞಾನಿಕವಾಗಿ ಜಾತಿ ಜನಗಣತಿ ನಡೆಸಬೇಕು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಆಗ್ರಹಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ವಿ.ಸೋಮಣ್ಣ,’ಜಾತಿ ಜನಗಣತಿಗೆ ಕಾಂಗ್ರೆಸ್‌ನಲ್ಲೇ ವಿರೋಧ ವ್ಯಕ್ತವಾಗಿದೆ. ಯಾವುದೇ ಜಾತಿ, ಸಮುದಾಯಕ್ಕೂ ಅನ್ಯಾಯವಾಗಬಾರದು. ಹೀಗಾಗಿ ಅವೈಜ್ಞಾನಿಕವಾಗಿ ಸಿದ್ಧಪಡಿಸಿರುವ ಜಾತಿ ಜನಗಣತಿ ವರದಿಯನ್ನು ತಿರಸ್ಕರಿಸಿ ಮತ್ತೊಮ್ಮೆ ಗಣತಿ ನಡೆಸಬೇಕು ಎಂದರು.

ಜಾತಿ ಜನಗಣತಿ ವರದಿ ಸಿದ್ಧಪಡಿಸಲು ಈಗಾಗಲೇ ನೂರಾರು ಕೋಟಿ ಹಣ ವೆಚ್ಚ ಮಾಡಲಾಗಿದೆ. ಮತ್ತೊಮ್ಮೆ ಅಷ್ಟೊಂದು ಹಣ ನೀಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಯಾವುದಕ್ಕೂ ಇಂತಹ ನೂರಾರು ಕೋಟಿ ಹಣ ಖರ್ಚು ಮಾಡಿಲ್ಲವೇ ಎಂದು ವಿ.ಸೋಮಣ್ಣ ಪ್ರಶ್ನಿಸಿದರು.

Key words: Conduct, caste census, scientifically, Union Minister, V. Somanna