Saturday, August 22, 2026

BDA Apartments

Home Front Page KAS ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: ಮರುಪರೀಕ್ಷೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

KAS ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: ಮರುಪರೀಕ್ಷೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಸೆಪ್ಟೆಂಬರ್​ 02,2024 (www.justkannada.in):  ಆಗಸ್ಟ್ 27ರಂದು ನಡೆದ ಕೆಎಎಸ್ ಪೂರ್ವಭಾವಿ ಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ  ಹಲವು ಯಡವಟ್ಟುಗಳು  ಕಂಡು ಬಂದ ಹಿನ್ನೆಲೆಯಲ್ಲಿ ಎರಡು ತಿಂಗಳೊಳಗೆ KAS  ಪೂರ್ವಭಾವಿ ಮರುಪರೀಕ್ಷೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಕೆಪಿಎಸ್ ಸಿಗೆ ನಿರ್ದೇಶನ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ.

ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯನ್ನು ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ ಎಂದು ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

Key words: Conduct KAS, preliminary, re-examination, CM Siddaramaiah