Saturday, October 24, 2026

Dasara Wishes

Minister S.T. Somashekar releases Yuva Dasara posters DasraWishes_JK DasraWishes JK
Happy Dasara
Home Front Page ರೈತರೇ ನಡೆಸಿದ ಬೆಳೆ ಸಮೀಕ್ಷೆ ಮಾದರಿಯಲ್ಲಿ ಹಿಂಗಾರು ಬೆಳೆ ಸಮೀಕ್ಷೆ : ಕೃಷಿ ಸಚಿವ...

ರೈತರೇ ನಡೆಸಿದ ಬೆಳೆ ಸಮೀಕ್ಷೆ ಮಾದರಿಯಲ್ಲಿ ಹಿಂಗಾರು ಬೆಳೆ ಸಮೀಕ್ಷೆ : ಕೃಷಿ ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು,ನವೆಂಬರ್,07,2020(www.justkannada.in) :  ಮುಂಗಾರು ಬೆಳೆ ಸಮೀಕ್ಷೆ ಶೇ.100 ರಷ್ಟು ಯಶಸ್ವಿಯಾದ ಬೆನ್ನಲ್ಲೆ ಕೃಷಿ ಇಲಾಖೆ ಮುಂಗಾರು ಬೆಳೆ ಸಮೀಕ್ಷೆ ನಡೆಸಿದ ಮಾದರಿಯಲ್ಲಿಯೇ ಹಿಂಗಾರು ಬೆಳೆ ಸಮೀಕ್ಷೆ ನಡೆಸಲು ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ಹಿಂಗಾರು ಬೆಳೆ ಸಮೀಕ್ಷೆ ಸಂಬಂಧ ಕೃಷಿ ಸಚಿವ ಬಿ.ಸಿ.ಪಾಟೀಲ್ ಇಲಾಖಾಧಿಕಾರಿಗಳ ಜತೆ ಸಭೆ ನಡೆಸಿದರು.jk-logo-justkannada-logo

ವಿಕಾಸಸೌಧದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ರೈತರೇ ತಮ್ಮ ಬೆಳೆ ಜಮೀನಿನ ಸಮೀಕ್ಷೆಯನ್ನು ತಾವೇ ಆ್ಯಪ್ ಮೂಲಕ ನಡೆಸಿದ್ದು, ಇದೇ ಮಾದರಿಯಲ್ಲಿಯೇ ಹಿಂಗಾರು ಬೆಳೆ ಸಮೀಕ್ಷೆಯನ್ನು ಕೂಡ ಯಶಸ್ವಿಯಾಗಿ ನಡೆಸುವ ಬಗ್ಗೆ ಸಚಿವರು ಇಲಾಖಾಧಿಕಾರಿಗಳೊಂದಿಗೆ ಚರ್ಚಿಸಿದರು.

ಮಾಸ್ಟರ್ಸ್ ಗಳಿಗೆ ಹಿಂಗಾರು ಬೆಳೆ ಸಮೀಕ್ಷೆ ಬಗ್ಗೆ ತರಬೇತಿ ನೀಡುವುದು, ಮಾಸ್ಟರ್ಸ್ ತರಬೇತುದಾರರಿಂದ ಖಾಸಗಿ ನಿವಾಸಿಗಳಿಗೆ (ಪಿಆರ್ ಓ) ರೈತರ ಬೆಳೆ ಸಮೀಕ್ಷೆ ಆ್ಯಪ್ ಬಗ್ಗೆ ತರಬೇತಿ ನೀಡಿ ಬಳಿಕ ಆ್ಯಪ್ ಮೂಲಕ ರೈತರೇ ತಮ್ಮ ಬೆಳೆ ಸಮೀಕ್ಷೆಯನ್ನು ತಾವೇ ನಡೆಸಲು ಕ್ರಮಕೈಗೊಳ್ಳುವುದು ಸೇರಿದಂತೆ ಮತ್ತಿತ್ತರ ವಿಷಯಗಳ ಕುರಿತು ಸಭೆಯಲ್ಲಿ ಮಾಹಿತಿ ಪಡೆಯಲಾಯಿತು.

ಡಿಸೆಂಬರ್ ಮೊದಲ ವಾರದಲ್ಲಿ ಹಿಂಗಾರು ಬೆಳೆ ಸಮೀಕ್ಷೆ ರೈತರ ಆ್ಯಪ್ ಬಿಡುಗಡೆಯಾಗಲಿದ್ದು, ಶೀಘ್ರದಲ್ಲಿಯೇ ದಿನಾಂಕ ಪ್ರಕಟಿಸುವುದಾಗಿ ಹಾಗೂ ಮುಂಗಾರು ಬೆಳೆ ಸಮೀಕ್ಷೆ ಯಶಸ್ವಿಯಾದಂತೆ ಹಿಂಗಾರು ಬೆಳೆ ಸಮೀಕ್ಷೆಯನ್ನು ಯಶಸ್ವಿಗೊಳಿಸಬೇಕೆಂದು ಬಿ.ಸಿ.ಪಾಟೀ್ಲ್ ಮನವಿ ಮಾಡಿದ್ದಾರೆ.Conducted-farmers-Crop-Survey-model-Monsoon-Crop-Survey-Agriculture-Minister-B.C.Patil

ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಜಕುಮಾರ್ ಕತ್ರಿ, ನಿರ್ದೇಶಕ ಶ್ರೀನಿವಾಸ್,ಹೆಚ್ಚುವರಿ ನಿರ್ದೇಶಕ ಆ್ಯಂತೋನಿ ಎಂ. ಇಮ್ಯಾನುಲ್ ಸೇರಿದಂತೆ ಮತ್ತಿತ್ತರ ಅಧಿಕಾರಿಗಳು ಉಪಸ್ಥಿತರಿದ್ದರು.

Conducted-farmers-Crop-Survey-model-Monsoon-Crop-Survey-Agriculture-Minister-B.C.Patil

key words : Conducted-farmers-Crop-Survey-model-Monsoon-Crop-Survey-Agriculture-Minister-B.C.Patil