ಐಎಎಸ್ ಅಧಿಕಾರಿಗಳ ಸಂಘರ್ಷ ವಿಚಾರ: ಇನ್ನು ಎರಡು ದಿನಗಳಲ್ಲಿ ಏನಾಗುತ್ತೆ ಕಾದು ನೋಡಿ ಎಂದ ಸಚಿವ ಎಸ್.ಟಿ ಸೋಮಶೇಖರ್.

ಮೈಸೂರು,ಜೂನ್,4,2021(www.justkannada.in): ಮೈಸೂರು ಜಿಲ್ಲೆಯಲ್ಲಿ ಐಎಎಸ್ ಅಧಿಕಾರಿಗಳ ಸಂಘರ್ಷ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಪ್ರತಿಕ್ರಿಯಿಸಿದ್ದು, ಇನ್ನು ಎರಡು ದಿನಗಳಲ್ಲಿ ಏನಾಗುತ್ತೆ ಕಾದು ನೋಡಿ ಎಂದು ಹೇಳಿದ್ದಾರೆ.jk

ಮೈಸೂರು ಡಿಸಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ರಾಜೀನಾಮೆ ನೀಡಿದ್ದು ಈ ಇಬ್ಬರು ಅಧಿಕಾರಿಗಳ ನಡುವಿನ ಸಂಘರ್ಷ ಸಾಕಷ್ಟು ಸದ್ಧು ಮಾಡುತ್ತಿದೆ. ಈ ಬಗ್ಗೆ ಇಂದು ಮೈಸೂರಿನಲ್ಲಿ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ಜಿಲ್ಲಾಡಳಿತದ ಸಂಘರ್ಷ ನನ್ನ ಕೈಮೀರಿದೆ. ಅಧಿಕಾರಿಗಳ ಸಂಘರ್ಷ ನನ್ನ ವ್ಯಾಪ್ತಿಯಲ್ಲಿ ಉಳಿದಿಲ್ಲ. ಸಿಎಂಗೆ ಎಲ್ಲವನ್ನು ತಿಳಿಸಿದ್ದೇನೆ ಎಂದು ಸಚಿವ ಎಸ್ ಟಿ ಸೋಮಶೇಖರ್ ಅಸಹಾಯಕತೆ ವ್ಯಕ್ತಪಡಿಸಿದರು.

ಕೋವಿಡ್ ನಿಯಂತ್ರಣ ‌ಮಾಡೋದು ನನ್ನ ಆದ್ಯತೆ‌. ಆ ನಿಟ್ಟಿನಲ್ಲಿ ನಾನು ಕೆಲಸ ಮಾಡುತ್ತಿದ್ದೇನೆ. ಯಾರು ಸರಿ ಯಾರು ತಪ್ಪು ಅಂತ ಹೇಳಲ್ಲ‌.  ಎಲ್ಲವನ್ನೂ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ.  ಅವರು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಸಚಿವ ಎಸ್.ಟಿ ಸೋಮಶೇಖರ್ ಹೇಳಿದರು.

Key words: Conflict -issue -IAS officers-Wait -next two days-Minister -ST Somashekhar