Wednesday, August 26, 2026

BDA Apartments

Home Front Page ಮೈತ್ರಿ, ಸೀಟು ಹಂಚಿಕೆ ವಿಚಾರದಲ್ಲಿ ಗೊಂದಲ ವಿಚಾರ: ಸ್ಪಷ್ಟನೆ ನೀಡಿದ ಮಾಜಿ ಸಿಎಂ ಹೆಚ್.ಡಿಕೆ.

ಮೈತ್ರಿ, ಸೀಟು ಹಂಚಿಕೆ ವಿಚಾರದಲ್ಲಿ ಗೊಂದಲ ವಿಚಾರ: ಸ್ಪಷ್ಟನೆ ನೀಡಿದ ಮಾಜಿ ಸಿಎಂ ಹೆಚ್.ಡಿಕೆ.

ಬೆಂಗಳೂರು,ಮಾರ್ಚ್,19,2024(www.justkannada.in):  ಲೋಕಸಭೆ ಚುನಾವಣೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಮತ್ತು ಜೆಡಿಎಸ್ ನಡುವೆ ಬಿರುಕುಂಟಾಗಿದ್ದು, ಸೀಟು ಹಂಚಿಕೆಯಲ್ಲಿ ಗೊಂದಲವಾಗಿದೆ ಎಂದು ವರದಿಯಾದ ಹಿನ್ನೆಲೆಯಲ್ಲಿ ಈ ಕುರಿತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಮೈತ್ರಿಯಲ್ಲಿ ಯಾವುದೇ ಗೊಂದಲವಿಲ್ಲ. ನಮ್ಮ ಸಂಬಂಧದ ಬಗ್ಗೆ ಯಾವುದೇ ಗೊಂದಲ ಇಲ್ಲ. ಮೈತ್ರಿ ಮಾಡಿಕೊಂಡಿದ್ದೆ ಕಾಂಗ್ರೆಸ್ ವಿರುದ್ದ ಎಂದು ಸ್ಪಷ್ಟನೆ ನೀಡಿದರು.

ಕಾಂಗ್ರೆಸ್ ನವರು ನಮ್ಮ ಪದೇ ಪದೇ ಬಿಜೆಪಿ ಬಿ ಟೀಮ್ ಎನ್ನುತ್ತಿದ್ದರು . ಜೆಡಿಎಸ್ ಮುಗಿಸಲು ಕಾಂಗ್ರೆಸ್ ಪ್ರಯತ್ನಿಸಿತು. ರಾಜಕೀಯವಾಗಿ ಡಿಕೆ ಶಿವಕುಮಾರ್ ನಮಗೆ ವಿಷ ಹಾಕಿದ್ದಾರೆ. ಹಾಸನ ಮಂಡ್ಯ ಕೋಲಾರದಲ್ಲಿ ನಾವೇ ಗೆಲ್ಲುತ್ತೇವೆ.  ಹೀಗಾಗಿ 3 ಕ್ಷೇತ್ರಗಳ ಕಾರ್ಯಕರ್ತರಿಗೆ ಮನವಿ ಮಾಡುತ್ತೇನೆ. ನಮ್ಮ ಕಾರ್ಯಕರ್ತರು ಆತಂಕ ಪಡಬೇಡಿ ಕೆಲಸ ಮಾಡಿ . ನಾನು ಒಂದು ವಾರದಲ್ಲಿ ಬಂದು ಕೆಲಸ ಮಾಡುತ್ತೇನೆ ಎಂದು ಹೆಚ್.ಡಿಕೆ ತಿಳಿಸಿದ್ದಾರೆ.

Key words: Confusion- about –alliance-seat –allocation- Former CM- HD Kumaraswamy- clarified.