Saturday, August 8, 2026

BDA Apartments

Home Front Page ಅಂಡರ್ 19 ವಿಶ್ವಕಪ್ ಕ್ರಿಕೆಟ್ ಟ್ರೋಫಿ ಗೆದ್ದ ಟೀಂ ಇಂಡಿಯಾಗೆ ಅಭಿನಂದನೆಗಳ ಮಹಾಪೂರ

ಅಂಡರ್ 19 ವಿಶ್ವಕಪ್ ಕ್ರಿಕೆಟ್ ಟ್ರೋಫಿ ಗೆದ್ದ ಟೀಂ ಇಂಡಿಯಾಗೆ ಅಭಿನಂದನೆಗಳ ಮಹಾಪೂರ

ಬೆಂಗಳೂರು, ಫೆಬ್ರವರಿ 06,2021 (www.justkannada.in): ಆ್ಯಂಟಿಗುವಾದ ಸರ್‌ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ 19 ವರ್ಷದೊಳಗಿನವರ ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಭಾರತ ತಂಡವನ್ನು ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಅಭಿನಂದಿಸಿದ್ದಾರೆ. ಜತೆಗೆ ಆಟಗಾರರಿಗೆ 40 ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ.

ಇನ್ನು ಟ್ರೋಫಿ ಗೆದ್ದ ಭಾರತ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ‘ನಮ್ಮ ಯುವ ಕ್ರಿಕೆಟಿಗರ ಬಗ್ಗೆ ಅಪಾರ ಹೆಮ್ಮೆ ಇದೆ. ಐಸಿಸಿ ಅಂಡರ್‌ -19 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಅಭಿನಂದನೆಗಳು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಬೌಲಿಂಗ್​ ಹಾಗೂ ಬ್ಯಾಟಿಂಗ್​ ವಿಭಾಗದಲ್ಲಿ ಸಮತೋಲಿತ ಪ್ರದರ್ಶನ ನೀಡಿದ ಟೀಮ್​ ಇಂಡಿಯಾ ಅಂಡರ್​ 19 ವಿಶ್ವಕಪ್​ ಟೂರ್ನಿಯ ಫೈನಲ್​ನಲ್ಲಿ ಬಲಿಷ್ಠ ಇಂಗ್ಲೆಂಡ್​ ತಂಡದ ವಿರುದ್ಧ ರೋಚಕಗೆಲುವು ದಾಖಲಿಸುವ ಮೂಲಕ ವಿಶ್ವಕಪ್​ ಟ್ರೋಫಿಯನ್ನು ಎತ್ತಿ ಹಿಡಿದಿದೆ.