Tuesday, September 29, 2026

BDA Apartments

ಕಾಂಗ್ರೆಸ್ 20 ಕ್ಕೂ ಹೆಚ್ಚು ಸ್ಥಾನ ಗೆಲ್ಲದಿದ್ದರೇ ಸಿಎಂ ಸ್ಥಾನಕ್ಕೆ ಕಂಟಕ- ಸಚ...
Home Election 2024 ಕಾಂಗ್ರೆಸ್ 20 ಕ್ಕೂ ಹೆಚ್ಚು ಸ್ಥಾನ ಗೆಲ್ಲದಿದ್ದರೇ ಸಿಎಂ ಸ್ಥಾನಕ್ಕೆ  ಕಂಟಕ-  ಸಚಿವ ಭೈರತಿ ಸುರೇಶ್.

ಕಾಂಗ್ರೆಸ್ 20 ಕ್ಕೂ ಹೆಚ್ಚು ಸ್ಥಾನ ಗೆಲ್ಲದಿದ್ದರೇ ಸಿಎಂ ಸ್ಥಾನಕ್ಕೆ  ಕಂಟಕ-  ಸಚಿವ ಭೈರತಿ ಸುರೇಶ್.

ಕೋಲಾರ ,ಏಪ್ರಿಲ್, 18,2024 (www.justkannada.in): ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 20 ಕ್ಕೂ ಹೆಚ್ಚು ಸ್ಥಾನ ಗೆಲ್ಲದಿದ್ದರೇ ಸಿಎಂ ಸ್ಥಾನಕ್ಕೆ  ಕಂಟಕ ಬರಲಿದೆ ಎಂದು ಸಚಿವ ಭೈರತಿ ಸುರೇಶ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಕೋಲಾರ ಜಿಲ್ಲೆಯಲ್ಲಿ ಕುರುಬ ಸಮುದಾಯದ ಮುಖಂಡರ ಸಭೆಯಲ್ಲಿ ಮಾತನಾಡಿದ ಸಚಿವ ಬೈರತಿ ಸುರೇಶ್,  ಲೋಕಸಭೆ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ಎಐಸಿಸಿ ದೊಡ್ಡ ಜವಾಬ್ದಾರಿ ನೀಡಿದ್ದು ಕನಿಷ್ಠ ಪಕ್ಷ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲದೆ ಹೋದರೆ  ಸಿಎಂ ಸ್ಥಾನಕ್ಕೆ ಕುತ್ತು ಬರುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿದೆ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿಗಳು ಸೋತರೆ ಸಿದ್ದರಾಮಯ್ಯ ಸ್ಥಾನಕ್ಕೆ ಕಂಟಕವಿದೆ ಎಂದರು.ಕಾಂಗ್ರೆಸ್ 20 ಕ್ಕೂ ಹೆಚ್ಚು ಸ್ಥಾನ ಗೆಲ್ಲದಿದ್ದರೇ ಸಿಎಂ ಸ್ಥಾನಕ್ಕೆ ಕಂಟಕ bhairat...

ಕುರುಬ ಸಮುದಾಯ ಸಿಎಂ ಸಿದ್ದರಾಮಯ್ಯ ಕೈ ಬಲಪಡಿಸಬೇಕು ನಿಮ್ಮ ಬೆಂಬಲ ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ಮೇಲಿರಲಿ ಬೇರೆ ಅಭ್ಯರ್ಥಿ ಗೆದ್ದರೆ ಸಿದ್ದರಾಮಯ್ಯ ಸ್ಥಾನಕ್ಕೆ ಕಂಟಕವಾಗಲಿದೆ ಎಂದು ಸಚಿವ ಭೈರತಿ ಸುರೇಶ್ ಹೇಳಿದರು.

Key words: Congress, 20 seats,  Minister, Bhairati Suresh