ರಾಜ್ಯದಲ್ಲಿ ಕಾಂಗ್ರೆಸ್ ಪರ್ವ ಆರಂಭವಾಗಿದೆ: ಮುಂದೇ ನಾವೇ ಅಧಿಕಾರಕ್ಕೆ- ಡಿ.ಕೆ ಶಿವಕುಮಾರ್ ವಿಶ್ವಾಸ.

ಹಾಸನ,ಡಿಸೆಂಬರ್,25,2021(www.justkannada.in):  ರಾಜ್ಯದಲ್ಲಿ ಕಾಂಗ್ರೆಸ್ ಪರ್ವ ಆರಂಭವಾಗಿದೆ 2023ಕ್ಕೆ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಹಾಸನದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್, ಮೇಕೆದಾಟು ಯೋಜನೆ ರೈತರ ಪರ ಯೋಜನೆ ಹೀಗಾಗಿ ಯೋಜನೆ ಆರಂಭಿಸಬೇಕು. ಈ ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದೆ.  ರಾಜ್ಯದಲ್ಲಿ ಕಾಂಗ್ರೆಸ್ ಪರ್ವ ಆರಂಭವಾಗುತ್ತಿದೆ. ಮುಂದೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದರು.  

ನಮ್ಮ ಅವಧೀಯಲ್ಲಿ ವ್ಯಕ್ತಿಪೂಜೆಗೆ ಅವಕಾಶ ಕೊಡಲ್ಲ. ಅಭಿಮಾನಿಗಳದ್ದು ತಪ್ಪು ಎಂದು ಹೇಳಲ್ಲ.  ಆದರೆ ವ್ಯಕ್ತಿಗಿಂತ ಕಾಂಗ್ರೆಸ್ ಮುಖ್ಯ. ಹೀಗಾಗಿ ಕಾಂಗ್ರೆಸ್ ಗೆಲ್ಲಿಸಿ ಎಂದು ಕಾರ್ಯಕರ್ತರಿಗೆ ಡಿ.ಕೆ ಶಿವಕುಮಾರ್ ಕರೆ ನೀಡಿದರು.

Key words: Congress -begun – state-kpcc president-DK Sivakumar