ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ ಹಿಂದೆ ಕಾಂಗ್ರೆಸ್ ಕೈವಾಡ: ಯಾರೇ ಧರಣಿ ಮಾಡಿದ್ರೂ ಕ್ರಮ-ಎಚ್ಚರಿಕೆ ನೀಡಿದ ಸಿಎಂ ಬಿ.ಎಸ್ ಯಡಿಯೂರಪ್ಪ…

ಬೆಂಗಳೂರು,ಡಿ,19,2019(www.justkannada.in):  ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸಲಾಗುತ್ತಿರುವ ಪ್ರತಿಭಟನೆ ಹಿಂದೆ ಕಾಂಗ್ರೆಸ್ ಕೈವಾಡ ಇದೆ. ಈ ಸಂಬಂಧ ಯಾರೇ ಧರಣಿ ಮಾಡಿದರೂ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

 ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ,  ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಮುಸ್ಲಿಮರಿಗೆ ಯಾವುದೇ ತೊಂದರೆಯಾಗುವುದಿಲ್ಲ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಯಾರೇ ಪ್ರತಿಭಟನೆ ನಡೆಸಿದರೂ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಪ್ರತಿಭಟನೆಗಳ ಹಿಂದೆ ಕಾಂಗ್ರೆಸ್ ಪಕ್ಷದವರ ಕೈವಾಡವಿದೆ. ಯು.ಟಿ. ಖಾದರ್ ಅಂಥವರಿಂದ ಪ್ರತಿಭಟನೆಯಾಗುತ್ತದೆ. ರಾಜ್ಯದಲ್ಲಿ ಇದುವರೆಗೆ ಯಾವುದೇ ಸಮಸ್ಯೆಯಾಗಿಲ್ಲ. ಮುಸ್ಲಿಮರ ಸಂಪೂರ್ಣ ರಕ್ಷಣೆ ನಮ್ಮ ಹೊಣೆ ಎಂದು  ಹೇಳಿದರು.

ಕಾಂಗ್ರೆಸ್ ನವರ ಕಿತಾಪತಿ ಕೈವಾಡದಿಂದ ಪ್ರತಿಭಟನೆ ನಡೆಯುತ್ತಿದೆ. ಇದು ಹೀಗೆ ಮುಂದುವರೆದರೇ  ಅದರ ಪರಿಣಾಮ ಎದುರಿಸಬೇಕಾಗುತ್ತದೆ. ಸಿಎಎ ಪರವಾಗಿ ವಿರೋಧವಾಗಿ ಪ್ರತಿಭಟನೆ ನಡೆಸುವಂತಿಲ್ಲ. ಎಲ್ಲರೂ ಶಾಂತಿ ಕಾಪಾಡಬೇಕು. ಮುಸ್ಲೀಂರ ಸಂಪೂರ್ಣ ರಕ್ಷಣೆ ನಮ್ಮ ಹೊಣೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

Key words:  Congress – behind – protests- against -Citizenship Act- CM BS Yeddyurappa.