ಉಪ ಚುನಾವಣೆ ಮತದಾನದ ವೇಳೆ  ‘ಕೈ-ಕಮಲ’ ಕಾರ್ಯಕರ್ತರ ನಡುವೆ ಮಾರಾಮಾರಿ: ಪೊಲೀಸರಿಂದ ಲಘು ಲಾಠಿಚಾರ್ಜ್..

ಬೆಂಗಳೂರು,ಮೇ,29,2019(www.justkannada.in):  ಬಿಪಿಎಂಪಿಯ ಕಾವೇರಿಪುರ ವಾರ್ಡ್ ಗೆ ಇಂದು ಉಪಚುನಾವಣೆ ನಡೆಯುತ್ತಿದ್ದು, ಮತದಾನದ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದು ಪೊಲೀಸರು ಲಘುಲಾಠಿ ಪ್ರಹಾರ ಮಾಡಿದ ಘಟನೆ ನಡೆದಿದೆ.

ಇಂದು ಬಿಬಿಎಂಪಿಯ ಕಾವೇರಿಪುರ ಮತ್ತು ಸಗಾಯಪುರ ವಾರ್ಡ್ ಗೆ ಉಪ ಚುನಾವಣೆಯ ಮತದಾನ ನಡೆಯುತ್ತಿದೆ. ಮತದಾನದ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಏರ್ಪಟ್ಟಿದ್ದು ಮಾತಿಗೆ ಮಾತು ಬೆಳೆದು ಕೈಕೈ ಮಿಲಾಯಿಸಿದ್ದಾರೆ. ಅಲ್ಲದೆ ಎರಡು ಪಕ್ಷದ ಕಾರ್ಯಕರ್ತರು ದೊಣ್ಣೆಯಿಂದ ಹೊಡೆದಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ವೇಳೆ ಪೊಲೀಸರು  ಬಡಿದಾಡಿಕೊಳ್ಳುತ್ತಿದ್ದ ಕಾರ್ಯಕರ್ತರನ್ನ ಚದುರಿಸಲು ಲಘುಲಾಠಿ ಪ್ರಹಾರ ನಡೆಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಇದೀಗ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಶಾಂತಿಯುತವಾಗಿ ಮತದಾನ ನಡೆಯುತ್ತಿದೆ.

Key words: Congress-BJP activists clash in caveri ward byelection -Latchcharge by police..

#byelection #Congress #BJPactivists #police