ರಾಮನಗರ, ಶಿಕಾರಿಪುರದಲ್ಲಿ ಕಾಂಗ್ರೆಸ್, ಬಿಜೆಪಿ ಒಳ ಒಪ್ಪಂದ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆರೋಪ.

0
1

ರಾಮನಗರ,ಏಪ್ರಿಲ್,17,2023(www.justkannada.in):  ಜೆಡಿಎಸ್ ಮುಗಿಸಲು ಕಾಂಗ್ರೆಸ್ ಮತ್ತು ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿವೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

ರಾಮನಗರದ ಜೆಡಿಎಸ್ ಅಭ್ಯರ್ಥಿಯಾಗಿ ಇಂದು ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಮಾಡಿದರು. ಬಳಿಕ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ,  ಜೆಡಿಎಸ್ ಮಗಿಸಲು ಕಾಂಗ್ರೆಸ್ ಬಿಜೆಪಿ ಒಳ ಒಪ್ಪಂದ. ಮಾಡಿಕೊಂಡಿದೆ.  ಶಿಕಾರಿಪುರದಲ್ಲೂ ಬಿಜೆಪಿ ಗೆಲ್ಲಿಸಲು ಕಾಂಗ್ರೆಸ್,  ರಾಮನಗರದಲ್ಲಿ ಕಾಂಗ್ರೆಸ್ ಗೆಲ್ಲಿಸಲು ಬಿಜೆಪಿ ಮುಂದಾಗಿವೆ.

ನನ್ನ ಜೀವ ಇರುವವರೆಗೂ ನಾನು ರಾಮನಗರ ಬಿಡಲ್ಲ. ನಾಣು ಹುಟ್ಟಿದ್ದು ಹಾಸನದಲ್ಲಿ,  ಮಣ್ಣಾಗುವುದು ರಾಮನಗರದಲ್ಲಿ ಎಂದು ಹೆಚ್.ಡಿ ಕುಮಾರಸ್ವಾಮಿ ಹೇಳಿದರು.

Key words: Congress-BJP -internal collusion –Ramanagara-Shikaripura- HD Kumaraswamy