Sunday, August 23, 2026

BDA Apartments

Home Front Page ಅಧಿಕಾರದ ಮದದಿಂದ ಕಾಂಗ್ರೆಸ್ ಮಿದುಳಿಗೂ ಗೆದ್ದಲು ಹಿಡಿದಿದೆ- ಜೆಡಿಎಸ್  ಘಟಕ ಟೀಕೆ.

ಅಧಿಕಾರದ ಮದದಿಂದ ಕಾಂಗ್ರೆಸ್ ಮಿದುಳಿಗೂ ಗೆದ್ದಲು ಹಿಡಿದಿದೆ- ಜೆಡಿಎಸ್  ಘಟಕ ಟೀಕೆ.

ಬೆಂಗಳೂರು,ಅಕ್ಟೋಬರ್,11,2023(www.justkannada.in):  ಡಿಸಿಎಂ ಡಿಕೆ ಶಿವಕುಮಾರ್ ( ಮತ್ತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ  ನಡುವೆ ರಾಜಕೀಯ ವಾಕ್ಸಮರ ನಡೆಯುತ್ತಿದ್ದು , ಸಮಿಶ್ರ ಸರ್ಕಾರ ಬೀಳಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಕಾರಣ ಎಂಬ ಹೆಚ್. ​ಡಿ ಕುಮಾರಸ್ವಾಮಿ ಆರೋಪಕ್ಕೆ ಕಾಂಗ್ರೆಸ್ ತಿರುಗೇಟು ನೀಡಿತ್ತು. ಈ ಸಂಬಂಧ ಇದೀಗ ಕಾಂಗ್ರೆಸ್ ನಾಯಕರ ವಿರುದ್ಧ ಜೆಡಿಎಸ್ ಘಟಕ ಟ್ವಿಟ್ಟರ್ ನಲ್ಲಿ ಟೀಕಾಪ್ರಹಾರ ನಡೆಸಿದೆ.

ಈ ಕುರಿತು ಟ್ವಿಟ್ ಮಾಡಿರುವ ಜೆಡಿಎಸ್, ಮೂರ್ಖರಿಗೆ ಬುದ್ಧಿ ಮಂದ ಎನ್ನುವುದು ಮಾತು. ಕರ್ನಾಟಕದಲ್ಲಿ ಕಾಂಗ್ರೆಸ್  ಪಕ್ಷಕ್ಕೆ ಅದೇ ಆಗಿದೆ. ಅಧಿಕಾರದ ಮದದಿಂದ ಅದರ ಮಿದುಳಿಗೂ ಗೆದ್ದಲು ಹಿಡಿದಿದೆ ಎಂದು   4 ವರ್ಷದ ಹಿಂದೆ ಸರಕಾರ ಮಾಡಲು ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಅವರ ಮನೆಗೆ  ಹೆಚ್.ಡಿ ಕುಮಾರಸ್ವಾಮಿ ಅವರು ಬಂದಿದ್ದರಾ? ಸುಳ್ಳು ಹೇಳುವುದಕ್ಕೆ ಸಾಸಿವೆ ಕಾಳಿನಷ್ಟಾದರೂ ಸಂಕೋಚ ಬೇಡವೇ?

135 ಸೀಟು ಗೆದ್ದಿದ್ದೇವೆ ಎನ್ನುವ ಧಿಮಾಕಿನಲ್ಲಿ ಏನು ಹೇಳಿದರೂ ಜನ ನಂಬುತ್ತಾರೆಂಬ ಅಹಂಕಾರವೇ? ಆಗ  ಹೆಚ್ ಡಿ ದೇವೇಗೌಡ ಅವರ ಮನೆ ಅಂಗಳದಲ್ಲಿ ಅಂಗಿ ಮಡಚಿ ಮುಖ ಒಣಗಿಸಿಕೊಂಡು ನಿಂತ ಧೀರರು ಯಾರೆಂದು ಗೊತ್ತಿಲ್ಲವೇ? ಎಲ್ಲೋ ಇದ್ದ ಕುಮಾರಸ್ವಾಮಿ ಅವರನ್ನು ಪಾಪರಾಜ್ಜಿಗಳಂತೆ ಬೆನ್ಹತ್ತಿ, ಆಮೇಲೆ ಕಾಡಿ ಬೇಡಿ ದೇವೇಗೌಡರ ಪದತಲಕ್ಕೆ ಬಿದ್ದವರ ಪುರಾಣ ಬಿಚ್ಚಿಡಬೇಕೆ? ಎಂದು ಟಾಂಗ್ ನೀಡಿದೆ.

‘ಕೈ’ ಅಭಯದ ಸಂಕೇತವೆಂದು ನಂಬಿದ್ದರು ಕುಮಾರಸ್ವಾಮಿ. ಆದರೆ, ಡಿ.ಕೆ.ಶಿವಕುಮಾರ್‌ ಅವರದ್ದು ‘ಕೈ’ ಎತ್ತುವುದಷ್ಟೇ ಅಲ್ಲ, ‘ಕೈ’ ಕೊಡುವುದರಲ್ಲೂ ಎತ್ತಿದ ‘ಕೈ’ ಎಂದು ಅವರಿಗೆ ಗೊತ್ತಾಗಲೇ ಇಲ್ಲ. ಅಸೆಂಬ್ಲಿಯಲ್ಲಿ ‘ಕೈ’ ಎತ್ತಿದರು, ಮಂಡ್ಯದಲ್ಲೂ ‘ಕೈ’ ಎತ್ತಿದರು. ಬೆಂಗಳೂರು ಗ್ರಾಮಾಂತರದಲ್ಲೂ ‘ಕೈ’ ಎತ್ತಿದರು!! ಪಾಪ.. ಕುಮಾರಸ್ವಾಮಿ ಅವರು ನಂಬಿದರು. ಬೆಂಗಳೂರು ಗ್ರಾಮಾಂತರದಲ್ಲಿ ಕುಮಾರಸ್ವಾಮಿಯವರು, ಅವರ ‘ಕೈ’ ಹಿಡಿದರು. ಮಂಡ್ಯದಲ್ಲಿ ಅದೇ ‘ಕೈ’ ಅವರನ್ನು ನಡುರಸ್ತೆಯಲ್ಲಿ ಬಿಟ್ಟು ಜಾರಿಕೊಂಡಿತು.

ಇದೆಂತಾ ಕೈಚಳಕ? ಅವರ ಹಸ್ತವಾಸಿ ವಿಸ್ವಾಸಘಾತುಕಕ್ಕೇ ಹೆಸರುವಾಸಿ.. ಅಲ್ಲವೇ? ಎಂದು ಕಾಂಗ್ರೆಸ್ ವಿರುದ್ದ ಜೆಡಿಎಸ್ ವಾಗ್ದಾಳಿ ನಡೆಸಿದೆ.

Key words: Congress – brains – power – JDS- criticizes.