ಸಂಡೂರು,ನವೆಂಬರ್,23,2024 (www.justkannada.in): ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಜಯಭೇರಿ ಬಾರಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಎನ್ ಡಿಎ ಅಭ್ಯರ್ಥಿ ಬಂಗಾರು ಹನುಮಂತು ಅವರನ್ನ 8 ಸಾವಿರ ಮತಗಳ ಅಂತರದಿಂದ ಸೋಲಿಸಿದ್ದು ಈ ಕುರಿತು ಅಧಿಕೃತ ಘೋಷಣೆ ಬಾಕಿ ಇದೆ.
ಇನ್ನು 2 ಸುತ್ತು ಮತ ಎಣಿಕೆ ಬಾಕಿ ಇದ್ದು ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರಿಗೆ 83 368 ಮತಗಳು ಹಾಗೂ ಬಂಗಾರು ಹನುಮಂತು ಅವರಿಗೆ 74487 ಮತಗಳು ಲಭಿಸಿವೆ.
Key words: Congress candidate, Annapurna Tukaram, wins, Sandur