Sunday, August 23, 2026

BDA Apartments

Home Front Page ಕಾಂಗ್ರೆಸ್ ಅಭ್ಯರ್ಥಿ ಡಾ.ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ: ತಲೆಗೆ ಗಾಯ.

ಕಾಂಗ್ರೆಸ್ ಅಭ್ಯರ್ಥಿ ಡಾ.ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ: ತಲೆಗೆ ಗಾಯ.

ತುಮಕೂರು,ಏಪ್ರಿಲ್,28,2023(www.justkannada.in):  ಕೊರಟಗೆರೆ ಕಾಂಗ್ರೆಸ್ ಅಭ್ಯರ್ಥಿ ಡಾಜಿ.ಪರಮೇಶ್ವರ್ ಪ್ರಚಾರ ನಡೆಸುತ್ತಿದ್ದ ವೇಳೆ ದುಷ್ಕರ್ಮಿಯೊಬ್ಬ ಕಲ್ಲು ತೂರಿದ್ದು ಡಾ.ಜಿ.ಪರಮೇಶ್ವರ್ ಅವರ ತಲೆಗೆ ಗಾಯವಾದ ಘಟನೆ ನಡೆದಿದೆ.

ಕೊರಟಗೆರೆ ತಾಲ್ಲೂಕಿನ ಬೈರೇನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಡಾ ಜಿ.ಪರಮೇಶ್ವರ್ ರನ್ನ ಕಾರ್ಯಕರ್ತರು ಎತ್ತಿ ಕುಣಿಯುತ್ತಿದ್ದ ವೇಳೆ ದುಷ್ಕರ್ಮಿಯೊಬ್ಬ ಪರಮೇಶ್ವರ್ ಅವರ ತಲೆಗೆ ಕಲ್ಲೆಸೆದಿದ್ದಾನೆ ಎನ್ನಲಾಗಿದೆ.

ಘಟನೆಯಲ್ಲಿ ಪರಮೇಶ್ವರ್ ಅವರ ತಲೆಗೆ ಪೆಟ್ಟಾಗಿದ್ದು ತಕ್ಷಣ ಅವರಿಗೆ ಅಕ್ಕಿರಾಂಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಸಿದ್ದಾರ್ಥ ಮೆಡಿಕಲ್ ಕಾಲೇಜಿಗೆ ಶಿಫ್ಟ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Congress candidate –G. Parameshwar -stone –pelted- head- injured.