ಫೆಬ್ರವರಿ ಅಂತ್ಯದೊಳಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಘೋಷಣೆ ಸಾಧ್ಯತೆ- ಬಿ.ಕೆ ಹರಿಪ್ರಸಾದ್.

ಉಡುಪಿ,ಫೆಬ್ರವರಿ,3,2023(www.justkannada.in): ಫೆಬ್ರವರಿ ಅಂತ್ಯದೊಳಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ  ಬಿ.ಕೆ ಹರಿಪ್ರಸಾದ್ ತಿಳಿಸಿದರು.

ಈ ಕುರಿತು ಇಂದು ಮಾತನಾಡಿದ ಬಿ.ಕೆ ಹರಿಪ್ರಸಾದ್,  ಈಗಾಗಲೇ 37 ಅಭ್ಯರ್ಥಿಗಳ ಪಟ್ಟಿ ನಿನ್ನೆ ಕೆಪಿಸಿಸಿಗೆ ಬಂದಿದೆ. ನಿನ್ನೆ ಸಂಜೆ 4 ಗಂಟೆವರೆಗೂ ಸುದೀರ್ಘವಾಗಿ ಚರ್ಚೆ ಮಾಡಲಾಗಿದೆ ಸಭೆಯಲ್ಲಿ ಎಲ್ಲರೂ ತಮ್ಮ ಅಭಿಪ್ರಾಯ, ಶಿಫಾರಸ್ಸುಗಳನ್ನ ಕೊಟ್ಟಿದ್ದಾರೆ. ಮುಂದಿನ ಹಂತದಲ್ಲಿ ಸ್ಕ್ರೀನಿಂಗ್ ಕಮಿಟಿ ಮುಂದೆ ಹೋಗಲಿದೆ.

ಕಮಿಟಿಯಲ್ಲಿ ಮೂವರು ಎಐಶಿಸಿ ನಾಯಕರು ಇರುತ್ತಾರೆ. ಸ್ಕ್ರೀನಿಂಗ್ ಕಮಿಟಿ ಬಳಿಕ ಸೆಂಟ್ರಲ್ ಎಲೆಕ್ಷನ್ ಕಮಿಟಿಗೆ  ಅಭ್ಯರ್ಥಿಗಳ ಪಟ್ಟಿ ಹೋಗುತ್ತೆ. ನಂತರ ಅಭ್ಯರ್ಥಿಗಳ ಪಟ್ಟಿಯನ್ನ ಎಐಸಿಸಿ ನಾಯಕರು ಘೋಷಣೆ ಮಾಡಲಿದ್ದಾರೆ. ಫೆಬ್ರವರಿ ಅಂತ್ಯದೊಳಗೆ ಅಭ್ಯರ್ಥಿಗಳ ಹೆಸರು ಘೋಷಣೆ ಸಾಧ್ಯತೆ ಇದೆ ಎಂದು ಬಿಕೆ ಹರಿಪ್ರಸಾದ್ ತಿಳಿಸಿದರು.

Key words: Congress -candidates -announced – end – February- BK Hariprasad