ವೀರಶೈವ ಲಿಂಗಾಯತ ಸಮುದಾಯವನ್ನ ಕಾಂಗ್ರೆಸ್ ಬಳಸಿಕೊಂಡು ವಂಚಿಸಿದೆ-ಬಿವೈ ವಿಜಯೇಂದ್ರ ಕಿಡಿ.

ಬೆಂಗಳೂರು,ಮೇ,19,2023(www.justkannada.in): ವೀರಶೈವ ಲಿಂಗಾಯತ ಸಮುದಾಯವನ್ನ ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಂಡು ಈಗ ನ್ಯಾಯ ಕೊಡದೇ ವಂಚಿಸಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿ ಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಬಿವೈ ವಿಜಯೇಂದ್ರ,  ‘ಅಧಿಕಾರಕ್ಕೆ ಬರಲು ವೀರಶೈವ ಲಿಂಗಾಯತ ಸಮುದಾಯವನ್ನ ಮೆಟ್ಟಿಲಾಗಿಸಿಕೊಂಡು, ಈಗ ಕಾಂಗ್ರೆಸ್ ಮರೆತಿದೆ, ಸಮುದಾಯದ ಹಿರಿಯ ನಾಯಕರೂ ಈಗ ಮೌನ ತಾಳಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವೀರಶೈವ ಲಿಂಗಾಯತ ಸಮುದಾಯದ 39 ಶಾಸಕರು ಗೆದ್ದಿದ್ದರೂ, ಉನ್ನತ ಸ್ಥಾನ ಕೇಳುವಲ್ಲಿ ಸಮುದಾಯದಿಂದ ಗಟ್ಟಿ ಧ್ವನಿ ಕೇಳಿಸುತ್ತಿಲ್ಲ. ಈಗ ಕಾಂಗ್ರೆಸ್ ಮುಖವಾಡ ಶಾಶ್ವತವಾಗಿ ಕಳಚಿ ಬಿದ್ದಿದೆ. ಸಮುದಾಯವನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಂಡು ವಂಚಿಸಿದೆ.

ಬಿಜೆಪಿ ಪಕ್ಷ  ಒಂದೇ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸಿದೆ. ಬಸವಣ್ಣನ ಆಶಯಗಳಿಗೆ ತಕ್ಕಂತೆ ನ್ಯಾಯ ಒದಗಿಸುವ ಪಕ್ಷವಾಗಿದೆ. ರಾಜ್ಯದ ಜನತೆ ಮತ್ತೆ ಬಿಜೆಪಿಯನ್ನು ಬೆಂಬಲಿಸುವ ವಿಶ್ವಾಸ ಇದೆ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ.

Key words: Congress- cheated-Veerashaiva-Lingayat -community – BY Vijayendra