Friday, September 18, 2026

BDA Apartments

ಶಾಸಕ ಯತ್ನಾಳ್ ವಿರುದ್ದ ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್ BDA JK_Adv BDA Adv
Home Front Page ಶಾಸಕ ಯತ್ನಾಳ್ ವಿರುದ್ದ ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

ಶಾಸಕ ಯತ್ನಾಳ್ ವಿರುದ್ದ ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

ಬೆಂಗಳೂರು,ಜೂನ್,18,2026 (www.justkannada.in):  ವಿಧಾನ ಪರಿಷತ್ ನ 7 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದ್ದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ದ ಕಾಂಗ್ರೆಸ್ ನಾಯಕರು ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.

ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ರಾಷ್ಟ್ರಾಧ್ಯಕ್ಷ ಬಿಪಿನ್ ನಬಿನ್ ಅವರಿಗೆ ಪತ್ರ ಬರೆದಿದ್ದರು. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ನೇತೃತ್ವದಲ್ಲಿ ಶಾಸಕ ಯತ್ನಾಳ್ ವಿರುದ್ದ ಚುನಾವಣಾಧಿಕಾರಿ ವಿಶಾಲಾಕ್ಷಿ ಅವರಿಗೆ ದೂರು ನೀಡಿದ್ದಾರೆ. ಈ ವೇಳೆ ಮಾಜಿ ಸಂಸದ ವಿ.ಎಸ್ ಉಗ್ರಪ್ಪ, ಶಾಸಕ ಬಸವರಾಜ ರಾಯರೆಡ್ಡಿ ಉಪಸ್ಥಿತರಿದ್ದರು.ಶಾಸಕ ಯತ್ನಾಳ್ ವಿರುದ್ದ ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್ congress

ವಿಧಾನ ಪರಿಷತ್ ಚುನಾವಣೆ ರಹಸ್ಯ ಮತದಾನದ ಮೂಲಕ ನಡೆಯುತ್ತಿದೆ. ಆದರೆ ಯತ್ನಾಳ್ ಬಹಿರಂಗವಾಗಿ ಬಿಜೆಪಿಗೆ ಮತ ಹಾಕುವಂತೆ ಪತ್ರ ಬರೆದಿದ್ದಾರೆ. ಹೀಗಾಗಿ ಯತ್ನಾಳ್ ಅವರ ಮತ ಅಸಿಂಧುಗೊಳಿಸುವಂತೆ ಚುನಾವಣಾಧಿಕಾರಿ ವಿಶಾಲಾಕ್ಷಿ ಅವರಿಗೆ ದೂರಿನಲ್ಲಿ ಮನವಿ ಮಾಡಿದ್ದಾರೆ.justkannada jk02_new jk02 new

Key words: Congress, complaint, against, MLA, Yatnal