ಧರ್ಮಗಳ ನಡುವಿನ ಸಂಘರ್ಷಕ್ಕೆ ಕಾಂಗ್ರೆಸ್ ಕಾರಣ: ಭಾರತ್ ಜೋಡೋ ಯಾತ್ರೆ ಟೀಕಿಸಿದ ನಳೀನ್ ಕುಮಾರ್ ಕಟೀಲ್.

ದಾವಣಗೆರೆ,ಅಕ್ಟೋಬರ್,8,2022(www.justkannada.in): ಭಾರತದ ವಿಭಜನೆಗೆ ಕಾಂಗ್ರೆಸ್ ಕಾರಣ ಧರ್ಮಗಳ ನಡುವೆ ಸಂಘರ್ಷಕ್ಕೆ ಕಾಂಗ್ರೆಸ್ ಕಾರಣ . ವಿಭಜನೆ ಮಾಡಿದವರು ಈಗ  ಜೋಡೋ ಯಾತ್ರೆ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಟೀಕಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಸಿದ್ಧರಾಮಣ್ಣ ಟಿಪ್ಪು ಜಯಂತಿ ಮಾಡಿದರು. ಮುಸಲ್ಮಾನ ಸಮುದಾಯದವರು ಟಿಪ್ಪು ಜಯಂತಿ ಕೇಳಿರಲಿಲ್ಲ. ಆದರೂ ಸಿದ್ದರಾಮಯ್ಯ ಜಯಂತಿ ಮಾಡಲು ಅವಕಾಶ ಕೊಟ್ಟರು. ಈ ಮೂಲಕ ಮುಸ್ಲಿಂರ ಭಾವನೆ ಕೆರಳುವಂತೆ ಮಾಡಿದ್ದೇ ಸಿದ್ದರಾಮಯ್ಯ. ವೀರಶೈವ ಲಿಂಗಾಯತ ಸಮುದಾಯ ಒಡೆಯಲು ಯತ್ನಿಸಿ ಸಮಾಜ ಇಬ್ಭಾಗ ಮಾಡಲು ಹೋಗಿ ಏನಾದರು ಎಂಬುದು ಎಲ್ಲರಿಗೂ ಗೊತ್ತಿದೆ  ಎಂದು ಟಾಂಗ್ ನೀಡಿದರು.

ಎಸ್ .ಸಿ ಮತ್ತು ಎಸ್ ಟಿ ಮೀಸಲಾತಿ ಹೆಚ್ಚಳ ವಿಚಾರ ಕುರಿತು ಪ್ರತಿಕ್ರಿಯಿಸಿದ  ನಳೀನ್ ಕುಮಾರ್ ಕಟೀಲ್,  ಸಿಎಂಗೆ ಅಭಿನಂದನೆ ಸಲ್ಲಿಸುತ್ತೇನೆ. ಎಸ್ ಸಿ ಎಸ್ ಟಿ ಸಮುದಾಯದ ಬೇಡಿಕೆ ಈಡೇರಿಸಿದ್ದಾರೆ ಬಿಜೆಪಿ ಬಹು ಸಮುದಾಯದ ಜೊತೆಗಿದೆ ಎಂದರು.

Key words: Congress – conflict- between- religions-Naleen Kumar Kateel