ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂದು ‘FSL’ ವರದಿಯಲ್ಲಿ ಬಯಲು- ಬಿಜೆಪಿ ಕಿಡಿ.

ಬೆಂಗಳೂರು, ಮಾರ್ಚ್,4,2024(www.justkannada.in): ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿರುವುದು ಇದೀಗ ಎಫ್ ಎಸ್ ಎಲ್ ವರದಿಯಲ್ಲಿ ದೃಢಪಟ್ಟಿದ್ದು ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿ  ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದೆ.

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದನ್ನು ವೈಜ್ಞಾನಿಕ ವರದಿ ಬಹಿರಂಗಪಡಿಸಿದೆ. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು “ನಾಸೀರ್ ಸಾಬ್ ಜಿಂದಾಬಾದ್” ಎಂದು ತಿರುಚಿ ಕನ್ನಡಿಗರಿಗೆ ಟೋಪಿ ಹಾಕಲು ಹೊರಟ ಹುನ್ನಾರ ಈಗ FSL ವರದಿಯಲ್ಲಿ ಬಟಾ ಬಯಲಾಗಿದೆ.

ರಾಷ್ಟ್ರ ವಿರೋಧಿ ಧೋರಣೆಯ ರಾಜ್ಯ ಕಾಂಗ್ರೆಸ್ ಹಾಗೂ ಸುಳ್ಳು ಸುದ್ದಿ ಕಾರ್ಖಾನೆಯ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಅವರು ಈಗಲಾದರೂ ತಮ್ಮ ದೇಶದ್ರೋಹದ ಕೃತ್ಯವನ್ನು ಒಪ್ಪಿಕೊಂಡು ವಿಧಾನಸೌಧದ ಎದುರು ಸಾಷ್ಟಾಂಗ ನಮಸ್ಕಾರ ಮಾಡಿ ಕನ್ನಡಿಗರ ಕ್ಷಮೆ ಕೋರಬೇಕು ಎಂದು ಬಿಜೆಪಿ ಆಗ್ರಹಿಸಿದೆ.

Key words: Congress – creators – fake news -revealed – FSL report- BJP