Friday, August 21, 2026

BDA Apartments

Home Front Page ರಾಜ್ಯದಲ್ಲಿ 28 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವು- ಡಿಸಿಎಂ ಡಿಕೆ ಶಿವಕುಮಾರ್ ವಿಶ್ವಾಸ.

ರಾಜ್ಯದಲ್ಲಿ 28 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವು- ಡಿಸಿಎಂ ಡಿಕೆ ಶಿವಕುಮಾರ್ ವಿಶ್ವಾಸ.

ಮೈಸೂರು, ಏಪ್ರಿಲ್,3,2024 (www.justkannada.in):  ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿನ 28 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಇಂದು ಮೈಸೂರಿನಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್,  ದೇಶದಲ್ಲಿ ಬಿಜೆಪಿ 200 ಸ್ಥಾನಗಳನ್ನೂ ಗೆಲ್ಲುವುದಿಲ್ಲ.ನಾನು ಮತ್ತು ಸಿದ್ದರಾಮಯ್ಯ ಅವರು ಹಾಗೂ ಸಂಪುಟದ ಸಹೋದ್ಯೋಗಿಗಳು ಒಗ್ಗಟ್ಟಾಗಿ ಈ ಸರ್ಕಾರವನ್ನು ಯಶಸ್ವಿಯಾಗಿ ಮುನ್ನಡೆಸುತ್ತೇವೆ. ಅಮಿತ್ ಶಾ ಅವರೇ ಅಧಿಕಾರ ಉಳಿಸಿಕೊಳ್ಳಲು ನಾನು ಕಾಯುತ್ತಾ ಇದ್ದೇನೆ ಎನ್ನುವುದು ನಿಮ್ಮ ಭ್ರಮೆ. ತಲೆಕೆಡಿಸಿಕೊಳ್ಳಬೇಡಿ ನಿಮ್ಮಲ್ಲಿ ಇರುವಷ್ಟು ಭಿನ್ನಾಬಿಪ್ರಾಯ, ಕಿತ್ತಾಟ ನಮ್ಮಲ್ಲಿ ಇಲ್ಲ ಎಂದು ಟಾಂಗ್ ಕೊಟ್ಟರು.

ಚಾಮರಾಜನಗರದಲ್ಲಿ ಶ್ರೀನಿವಾಸ್ ಪ್ರಸಾದ್ ಅವರ ಬೆಂಬಲಿಗರು,  ʼ ಕಾಂಗ್ರೆಸ್ ಸೇರುತ್ತಿದ್ದಾರೆ. ಜೆಡಿಎಸ್ ಬಿಜೆಪಿ ಕಾರ್ಯಕರ್ತರಿಗೆ ಕಿವಿಮಾತು ಹೇಳುತ್ತೇನೆ. ಮುಂದಿನ 10 ವರ್ಷ ಕಾಂಗ್ರೆಸ್ ಸರ್ಕಾರ ಇರುತ್ತದೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.

Key words: Congress, DCM, DK Shivakumar