ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆಗೆ ನಿರ್ಧಾರ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ.

ಬೆಂಗಳೂರು,ಜೂನ್,16,2023(www.justkannada.in):  ಹೆಚ್ಚುವರಿ ಅಕ್ಕಿ ಕೊಡಲು ನಿರಾಕರಿಸಿದ ಹಿನ್ನೆಲೆ ಕೇಂದ್ರ ಸರ್ಕಾರದ ವಿರುದ್ಧ  ಜೂನ್ 20 ರಂದು ಪ್ರತಿಭಟನೆಗೆ ಮುಂದಾಗಿರುವ ಕಾಂಗ್ರೆಸ್  ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಕಾಂಗ್ರೆಸ್ ನವರು ಪ್ರತಿಭಟನೆಗೆ ಮುಂದಾಗಿದ್ದಾರೆ. ಅವರು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕಿತ್ತು, ಮಾಡಿಕೊಳ್ಳಲಿಲ್ಲ. ಮುಂಗಾರು ವಿಫಲವಾಗಿರುವ ಕಾರಣ ಕೇಂದ್ರ ಸರ್ಕಾರ ತನ್ನದೇ ನೀತಿ ನಿಯಮ ಮಾಡಿದ್ದಾರೆ ಎಂದು ಕೇಂದ್ರದ ನಡೆ ಸಮರ್ಥಿಸಿಕೊಂಡರು.cm bommai

ಕೇವಲ ಕರ್ನಾಟಕಕ್ಕೆ ಮಾತ್ರ ಮಾಡಿಲ್ಲ. ಬಿಜೆಪಿ ಆಡಳಿತದ ರಾಜ್ಯಗಳಿಗೂ ಅದು ಅನ್ವಯಿಸುತ್ತದೆ.  ಅಕ್ಕಿಯನ್ನ ನಮ್ಮ ರೈತರಿಂದಲೇ ಖರೀದಿ ಮಾಡಿ, ಯಾಕೆ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದೀರಿ?,  ನೀವು ಬಡವರಿಗೆ 10ಕೆಜಿ ಅಕ್ಕಿ ಕೊಡದೇ ಇದ್ದರೆ ನಾವು ಪ್ರತಿಭಟನೆ ಮಾಡುತ್ತೇವೆ ಎಂದು ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದರು.

Key words: Congress-decided – protest- against  – Centre-  Former CM -Basavaraja Bommai -outrage