ಸಿಎಂ ಬದಲಾವಣೆ ಬಗ್ಗೆ ಪದೇ ಪದೇ ಹೇಳಿಕೆ:  ಇಬ್ಬರಿಗೆ ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ನೋಟಿಸ್

ಬೆಂಗಳೂರು, ಅಕ್ಟೋಬರ್,2,2025 (www.justkannada.in):  ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪದೇ ಪದೇ ಹೇಳಿಕೆ ನೀಡುತ್ತಿದ್ದ ಹಿನ್ನೆಲೆಯಲ್ಲಿ ಇಬ್ಬರಿಗೆ ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ನೋಟಿಸ್ ಜಾರಿ ಮಾಡಿದೆ.

ಕಾಂಗ್ರೆಸ್ ಶಾಸಕ ರಂಗನಾಥ್, ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡಗೆ ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ  ನೋಟಿಸ್ ಜಾರಿ ಮಾಡಿದ್ದು ಒಂದ ವಾರದೊಳಗೆ ಉತ್ತರಿಸುವಂತೆ ಇಬ್ಬರಿಗೂ ಸೂಚನೆ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪದೇ ಪದೇ ಸಿಎಂ ಬದಲಾವಣೆ ಬಗ್ಗೆ ಹೇಳಿಕೆ ನೀಡಿ ಮುಜುಗರವನ್ನುಂಟು ಮಾಡುತ್ತಿದ್ದ ಆರೋಪದ ಮೇಲೆ ನೋಟಿಸ್ ಜಾರಿಗೊಳಿಸಿದೆ.

Key words: Congress disciplinary committee, notice, statements, CM change