ಕಾಂಗ್ರೆಸ್‌ ಗೆ ಚುನಾವಣೆ ಎದುರಿಸುವ ಶಕ್ತಿ ಇಲ್ಲ: ಕರ್ನಾಟಕದಲ್ಲಿ 224 ಕ್ಷೇತ್ರ ನಮ್ಮ ಗುರಿ- ನಳೀನ್ ಕುಮಾರ್ ಕಟೀಲ್…

ಮೈಸೂರು,ಅಕ್ಟೋಬರ್,15,2020(www.justkannada.in): ಕಾಂಗ್ರೆಸ್‌ ಗೆ ಚುನಾವಣೆ ಎದುರಿಸುವ ಶಕ್ತಿ ಇಲ್ಲ. ತನ್ನ ಪಕ್ಷದ ಶಾಸಕನನ್ನ ರಕ್ಷಿಸಿಕೊಳ್ಳಲು ಕಾಂಗ್ರೆಸ್ ಗೆ ಸಾಧ್ಯವಾಗುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್  ಲೇವಡಿ ಮಾಡಿದರು.jk-logo-justkannada-logo

ಮೈಸೂರಿನಲ್ಲಿ ಇಂದು ಮಾತನಾಡಿದ ನಳೀನ್ ಕುಮಾರ್ ಕಟೀಲ್, ಪರಿಶಿಷ್ಟ ಜಾತಿಗೆ ಸೇರಿದ ಶಾಸಕನ ಮನೆಗೆ ಬೆಂಕಿ ಹಚ್ಚುವ ಕೆಲಸವನ್ನು ಕಾಂಗ್ರೆಸ್ಸಿಗರೇ ಮಾಡಿದ್ದಾರೆ. ಅವರನ್ನು ಬಂಧಿಸಿ ಅಂತ ಹೇಳಲು ಆ ಪಕ್ಷದ ಅಧ್ಯಕ್ಷರಿಗೆ ಆಗುತ್ತಿಲ್ಲ. ಇಂಥವರು ಚುನಾವಣೆಯನ್ನು ಹೇಗೆ ಎದುರಿಸುತ್ತಾರೆ ? ಎಂದು ಟೀಕಿಸಿದರು.congress-does-not-power-face-elections-state-bjp-president-naleen-kumar-kateel-mysore

ಉಪಚುನಾವಣೆ ನಡೆಯುವ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಪರ ಒಲವಿದೆ.  ಎರಡೂ ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ. ವಿಧಾನ ಪರಿಷತ್ತಿನಲ್ಲೂ ನಾಲ್ಕು ಸ್ಥಾನ ನಮ್ಮದಾಗಲಿದೆ. ಇನ್ನು ಗ್ರಾಮಪಂಚಾಯತ್ ಚುನಾವಣೆಗೆ ಸಿದ್ಧತೆಗಳು ಆಗಿವೆ. ಕರ್ನಾಟಕದಲ್ಲಿ 222 ಕ್ಷೇತ್ರ ನಮ್ಮಗುರಿ ಆ ಗುರಿಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯೋನ್ಮುಖರಾಗುತ್ತೇವೆ ಎಂದು ನಳೀನ್ ಕುಮಾರ್ ಕಟೀಲ್ ತಿಳಿಸಿದರು.

Key words: Congress- does not – power – face- elections-state- bjp-president-Naleen Kumar Kateel-mysore