Saturday, August 1, 2026

BDA Apartments

Home Front Page ದೆಹಲಿಯಲ್ಲಿ ಕಾಂಗ್ರೆಸ್ ಹೋರಾಟ: ರಾಜ್ಯದಲ್ಲಿ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ.  

ದೆಹಲಿಯಲ್ಲಿ ಕಾಂಗ್ರೆಸ್ ಹೋರಾಟ: ರಾಜ್ಯದಲ್ಲಿ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ.  

ಬೆಂಗಳೂರು, ಫೆಬ್ರವರಿ,7,2024(www.justkannada.in):  ತೆರಿಗೆ ಹಂಚಿಕೆಯಲ್ಲಿ  ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು  ಆರೋಪಿಸಿ  ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಇಂದು (ಫೆ.07) ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರೇ ಇತ್ತ ರಾಜ್ಯ ಸರ್ಕಾರದ ವಿರುದ್ದ ರಾಜ್ಯದಲ್ಲಿ ಬಿಜೆಪಿ ಧರಣಿಗೆ ಮುಂದಾಗಿದೆ.

ಕಾಂಗ್ರೆಸ್ ಪ್ರತಿಭಟನೆಗೆ  ಪ್ರತಿಯಾಗಿ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ವಿಧಾನಸೌಧದ ಎದುರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ  ನಡೆಸಲಿದ್ದಾರೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಸ್ವತಃ 222ಕ್ಕೂ ಹೆಚ್ಚು ತಾಲೂಕುಗಳನ್ನು ಬರಗಾಲ ಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಿದ್ದರೂ, ಈವರೆಗು ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಬರ ಪರಿಹಾರದ ಯಾವುದೇ ಕ್ರಮ ಕೈಗೊಂಡಿಲ್ಲ.

ಈ ಹಿನ್ನೆಲೆಯಲ್ಲಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರುಗಳ ನೇತೃತ್ವದಲ್ಲಿ ಇಂದು ಫೆಬ್ರವರಿ7 ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆ ನಡೆಸಲಾಗುವುದು” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟ್ವೀಟ್​ ಮಾಡಿದ್ದಾರೆ.

Key words: Congress -fight – Delhi: BJP- protests-against – government – state.